AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಸುಷ್ಮಾ ಚಕ್ರೆ
|

Updated on: Feb 14, 2026 | 10:22 PM

Share

ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯದ ಜನಸಾಮಾನ್ಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಯಡಿಯೂರಪ್ಪ ಅವರನ್ನು ದೇವೇಗೌಡರು ಮತ್ತು ಬಂಗಾರಪ್ಪನವರಂತಹ ಅಪರೂಪದ ನಾಯಕರಿಗೆ ಹೋಲಿಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಟಿವಿ9 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಸಾಧಕರನ್ನು ಸನ್ಮಾನಿಸಿದೆ. ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮತ್ತು ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಿದ್ದರು.

ಬೆಂಗಳೂರು, ಫೆಬ್ರವರಿ 14: ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 (Nava Nakshatra Award 2026) ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ವೇಳೆ ತಮ್ಮ 55 ವರ್ಷಗಳ ಸಾರ್ವಜನಿಕ ಜೀವನವನ್ನು ಸ್ಮರಿಸಿದ ಯಡಿಯೂರಪ್ಪ, ಈ ಗೌರವವನ್ನು ಕರ್ನಾಟಕದ ಜನತೆಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಸಮರ್ಪಿಸಿದರು. ಅಧಿಕಾರವಿರಲಿ, ಇಲ್ಲದಿರಲಿ, ರೈತರು ಮತ್ತು ಶೋಷಿತರ ಪರವಾಗಿ ದುಡಿಯುವ ತಮ್ಮ ಸಂಕಲ್ಪವನ್ನು ಅವರು ಪುನರುಚ್ಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಟಿವಿ9 ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ತಮ್ಮ 55 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಸಾಧನೆ ಮಾಡಿರುವುದಕ್ಕೆ ನಾಡಿನ ಜನರ ಹಾಗೂ ರೈತರ ಪ್ರೀತಿ, ಅಭಿಮಾನ ಮತ್ತು ಆಶೀರ್ವಾದವೇ ಕಾರಣ ಎಂದರು. ಜೀವನದ ಸಿಂಹಾವಲೋಕನ ಮಾಡಿಕೊಂಡಾಗ ತಮ್ಮ ಶ್ರಮ ಜೀವನದ ಬಗ್ಗೆ ತೃಪ್ತಿ ಮೂಡಿದೆ ಎಂದರು. ಆರ್‌ಎಸ್‌ಎಸ್ ಸ್ವಯಂಸೇವಕನಾಗಿ, ಜನಸಂಘ ಕಾರ್ಯಕರ್ತನಾಗಿ, ಪುರಸಭಾ ಸದಸ್ಯನಾಗಿ, ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಜನಬೆಂಬಲವೇ ತಮ್ಮ ಶ್ರೀರಕ್ಷೆಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಟಿವಿ9 ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಸಾಧಕರನ್ನು ಸನ್ಮಾನಿಸಿದೆ. ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮತ್ತು ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ