SM Krishna No More: ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅಗಮಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಪಕ್ಕ ಕುಳಿತರು

SM Krishna No More: ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅಗಮಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಪಕ್ಕ ಕುಳಿತರು

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 11, 2024 | 4:29 PM

SM Krishna No More: ಅಂತ್ಯ ಸಂಸ್ಕಾರದ ಎಲ್ಲ ಜವಾಬ್ದಾರಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹೊತ್ತುಕೊಂಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಅವರ ಪತ್ನಿ ಮತ್ತು ಮಕ್ಕಳು ಸಹ ಸ್ಥಳದಲ್ಲಿ ಕಾಣಿಸುತ್ತಾರೆ. ಅಂಬರೀಶ್ ಮಗ ಅಭಿಷೇಕ್ ಅಂಬರೀಶ್ , ಸಚಿವರಾದ ಎನ್ ಚಲುವರಾಯಸ್ವಾಮಿ, ಹೆಚ್ ಕೆ ಪಾಟೀಲ್, ಕೆಹೆಚ್ ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಟಿಬಿ ಜಯಚಂದ್ರ ಮತ್ತು ಇನ್ನೂ ಅನೇಕರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾರೆ.

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬದ್ಧ ರಾಜಕೀಯ ವೈರಿಗಳಾದರೂ ಅವರ ನಡುವೆ ಸ್ನೇಹವಿದೆ. ಸೋಮನಹಳ್ಳಿಯಲ್ಲಿ ಎಸ್ ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅಗಮಿಸಿದ ಗಣ್ಯರು ಅಕ್ಕಪಕ್ಕದಲ್ಲಿ ಕುಳಿತರು. ಯಡಿಯೂರಪ್ಪ ತಮ್ಮ ಮಗ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ಆಗಮಿಸಿ ಅಗಲಿದ ನಾಯಕನ ಅಂತಿಮ ದರ್ಶನ ಪಡೆಯುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: SM Krishna No More: ಮಾಜಿ ಮುಖ್ಯಮಂತ್ರಿಯ ಅಂತ್ಯ ಸಂಸ್ಕಾರಕ್ಕೆ ಬಳಕೆಯಾಗಲಿದೆ ಒಂದು ಟನ್ ಗಂಧದ ಕಟ್ಟಿಗೆ