ಲೋಕಸಭೆ ಚುನಾವಣೆ ಬೆನ್ನಲ್ಲೇ ಅನ್ನಪೂರ್ಣೇಶ್ವರಿ ಮೊರೆಹೋದ ಯಡಿಯೂರಪ್ಪ: ಶತ್ರುನಾಶಕ್ಕೆ ಚಂಡಿಕಾಯಾಗ
ಬಿ.ಎಸ್.ಯಡಿಯೂರಪ್ಪ, ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಸೇರಿದಂತೆ ಇಡೀ ಕುಟುಂಬ ಸದಸ್ಯರು ಇಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಕುಟುಂಬದ ಮೇಲೆ ಶತ್ರುತ್ವ ಹೆಚ್ಚಿದೆ ಎನ್ನಲಾಗುತ್ತಿದ್ದು, ಹೀಗಾಗಿ ಶತ್ರುನಾಶ, ಅಭಿವೃದ್ಧಿಗಾಗಿ ಚಂಡಿಕಾಯಾಗ ಮಾಡುತ್ತಿದ್ದಾರೆ.
ಚಿಕ್ಕಮಗಳೂರು, ಮಾರ್ಚ್ 23: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಜಿಲ್ಲೆಯ ಕಳಸ ತಾಲೂಕಿನ ನಾಡಿನ ಶಕ್ತಿ ದೇವತೆ ಅನ್ನಪೂರ್ಣೇಶ್ವರಿ ಸನ್ನಿಧಿಯ ಮೊರೆಹೋಗಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಸೇರಿದಂತೆ ಇಡೀ ಕುಟುಂಬ ಸದಸ್ಯರು ಇಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ರಾತ್ರಿ ಹೊರನಾಡಿನಲ್ಲಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಕುಟುಂಬ, ನಾಳೆ ಮುಂಜಾನೆ ಶಕ್ತಿದೇವತೆ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಚಂಡಿಕಾಯಾಗ ನಡೆಸಲಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಕುಟುಂಬದ ಮೇಲೆ ಶತ್ರುತ್ವ ಹೆಚ್ಚಿದೆ ಎನ್ನಲಾಗುತ್ತಿದ್ದು, ಹೀಗಾಗಿ ಶತ್ರುನಾಶ, ಅಭಿವೃದ್ಧಿಗಾಗಿ ಚಂಡಿಕಾಯಾಗ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published On - 9:38 pm, Sat, 23 March 24