Dharwad; ಎಸ್ ಯಡಿಯೂರಪ್ಪನವರು ನೇಪಥ್ಯಕ್ಕೆ ಸರಿಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2023 | 7:25 PM

ಭಗವಂತ ಅವರ ಕೈಕಾಲುಗಳನ್ನು ಗಟ್ಟಿಯಾಗಿಡುವಷ್ಟು ದಿನ ಮತ್ತು ಅವರು ಸಂಪೂರ್ಣವಾಗಿ ಆರೋಗ್ಯವಾಗಿರುವವರೆಗೆ ಪಕ್ಷದ ಕೆಲಸಗಳಲ್ಲಿ ಉಪಯೋಗಿಸಿಕೊಳ್ಳಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಧಾರವಾಡ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಬಿಎಸ್ ಯಡಿಯೂರಪ್ಪನವರನ್ನು (BS Yediyurappa) ಕಡೆಗಣಿಸುವ ಪ್ರಶ್ನೆಯೇ ಉದ್ಭವಿಸದು ಅಂತ ಸ್ಪಷ್ಟಪಡಿಸಿದರು. ವಿಧಾನ ಸಭೆಯಲ್ಲಿ ಅವರೇ ಹೇಳಿಕೊಂಡಿರುವ ವಿದಾಯದ ಭಾಷಣದಲ್ಲಿ (farewell speech) ಇನ್ನು ಮುಂದೆ ಪಕ್ಷದ ಸಂಘಟನೆಗಾಗಿ ಶ್ರಮಿಸುವುದಾಗಿ ಎಂದಿದ್ದಾರೆ. ಭಗವಂತ ಅವರ ಕೈಕಾಲುಗಳನ್ನು ಗಟ್ಟಿಯಾಗಿಡುವಷ್ಟು ದಿನ ಮತ್ತು ಅವರು ಸಂಪೂರ್ಣವಾಗಿ ಆರೋಗ್ಯವಾಗಿರುವವರೆಗೆ ಪಕ್ಷದ ಕೆಲಸಗಳಲ್ಲಿ ಉಪಯೋಗಿಸಿಕೊಳ್ಳಲಾಗುವುದು ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 24, 2023 07:19 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.