ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು?

Edited By:

Updated on: May 08, 2026 | 2:32 PM

ನಾಳೆ ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ಅದೃಷ್ಟ ತಂದ ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಎಸ್​​ವೈ ರಾಜಕೀಯ ಪ್ರಯಾಣದಲ್ಲಿ ಈ ಕಾರು ಪ್ರಮುಖ ಪಾತ್ರ ವಹಿಸಿದ್ದು, ನಗರ ಕೇಂದ್ರೀಕೃತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗೆ ಕೊಂಡೊಯ್ದು ಸಂಘಟನೆ ಬಲಪಡಿಸುವಲ್ಲಿ ಈ ವಾಹನ ನೆರವಾಗಿದೆ. ರಸ್ತೆಗಳು ದುಸ್ಥಿತಿಯಲ್ಲಿದ್ದ ದಿನಗಳಲ್ಲಿ, ಯಡಿಯೂರಪ್ಪ, ಅನಂತ್ ಕುಮಾರ್, ಶಂಕರ್ ಮೂರ್ತಿಗಳಂತಹ ನಾಯಕರು ರಾಜ್ಯಾದ್ಯಂತ ಇದೇ ಕಾರಿನಲ್ಲಿ ಸಂಚರಿಸಿದ್ದರು ಎನ್ನಲಾಗಿದೆ.

ಚಿತ್ರದುರ್ಗ, ಮೇ 08: ನಗರದಲ್ಲಿ ನಾಳೆ (ಮೇ 09) ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಅವರರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು ಯಡಿಯೂರಪ್ಪನವರಿಗೆ ಈ ಕಾರು ನೆರವಾಗಿದೆ. ಬಿಎಸ್​​ವೈ ಸೇರಿ ಪಕ್ಷದ ಅನೇಕ ಪ್ರಮುಖರು ಇದೇ ಕಾರಲ್ಲಿ ತೆರಳಿ ಪಕ್ಷದ ಪ್ರಚಾರ ಮಾಡಿದ್ದರು ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More