ಬಿ.ವೈ. ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಎಲ್ಲಾ ಬಿಚ್ಚಿಡ್ತೀನಿ ಎಂದಿದ್ದೇಕೆ ವಿಜಯಪುರ ಶಾಸಕ?

Updated on: Dec 17, 2025 | 11:25 AM

ಮಾನನಷ್ಟ ಮೊಕದ್ದಮೆ ಹಾಕುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಸವಾಲು ಹಾಕಿದ್ದಾರೆ. ತಂದೆಯ ಹೆಸರಿನಲ್ಲಿ ಅಧಿಕಾರ ಪಡೆಯುವ ಪದ್ಧತಿ ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ ಎಂದು ಟೀಕಿಸಿರುವ ಅವರು, ಬಿಜೆಪಿ ಭ್ರಷ್ಟಾಚಾರ ರಹಿತ ಮತ್ತು ಪ್ರಾಮಾಣಿಕ ನಾಯಕರನ್ನು ಬಯಸುತ್ತದೆ ಎಂದಿದ್ದಾರೆ. ಆ ಮೂಲಕ ಬಿಎಸ್​​ವೈ ಮತ್ತು ಅವರ ಕುಟುಂಬದ ವಿರುದ್ಧ ಯತ್ನಾಳ್​​ ಹೋರಾಟ ಇನ್ನಷ್ಟು ತೀವ್ರಗೊಂಡಿದೆ.

ಬೆಳಗಾವಿ, ಡಿಸೆಂಬರ್​​ 17: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಸವಾಲು ಹಾಕಿದ್ದಾರೆ. ವಿಜಯೇಂದ್ರ ಮೊದಲು ಒಂದು ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಲಿ, ಎಲ್ಲವನ್ನೂ ಬಯಲು ಮಾಟಡುತ್ತೇನೆ. ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಾಯಕತ್ವಕ್ಕೆ ಅರ್ಹತೆ ಮತ್ತು ಯೋಗ್ಯತೆ ಮುಖ್ಯವೇ ಹೊರತು ತಂದೆಯ ಹೆಸರುಲ್ಲ. ಇದು ರಾಜಮಹಾರಾಜರ ಕಾಲವಲ್ಲ, ಪ್ರಜಾಪ್ರಭುತ್ವದಲ್ಲಿ ಮೆರಿಟ್ ಆಧಾರದಲ್ಲಿ ನಾಯಕತ್ವ ಸಿಗಬೇಕು ಎಂದು ಯತ್ನಾಳ್ ಹೇಳಿದ್ದಾರೆ. ಜೊತೆಗೆ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಮಾತನಾಡಲು ಧೈರ್ಯವಿಲ್ಲದ ನಾಯಕತ್ವ ಬಿಜೆಪಿಗೆ ಬೇಡ ಎಂದು ಅವರು ಟೀಕಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 17, 2025 11:24 AM