ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಅಮಿತ್ ಶಾ ಭಾಗಿ, ಕೇಸರಿಮಯವಾದ ನಗರ

Edited By:

Updated on: May 08, 2026 | 9:48 AM

ಕೋಟೆನಾಡು ಚಿತ್ರದುರ್ಗದಲ್ಲಿ ನಾಳೆ ಬಿ.ಎಸ್.ಯಡಿಯೂರಪ್ಪ ಅವರ ‘ಬಿಎಸ್​ವೈ ಅಭಿಮಾನೋತ್ಸವ’ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಅದ್ದೂರಿ ವೇದಿಕೆ ಸಿದ್ಧವಾಗಿದ್ದು, ಮೆರವಣಿಗೆ ಮತ್ತು ಜನಪದ ಕಲಾಮೇಳಗಳ ಮೂಲಕ ಇಂದೇ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಕಾರ್ಯಕ್ರಮ ಸಿದ್ಧತೆ ಕುರಿತ ವಿಡಿಯೋ ಸಹಿತ ವಿವರ ಇಲ್ಲಿದೆ.

ಚಿತ್ರದುರ್ಗ, ಮೇ 8: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ‘ಬಿಎಸ್​ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಅದ್ದೂರಿಯಾಗಿ ಸಜ್ಜಾಗಿದೆ. ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.

ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಎಸ್​ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರ ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂದು (ಮೇ 7) ಸಂಜೆ ನಗರದ ಕನಕ ವೃತ್ತದಿಂದ ಚಳ್ಳಕೆರೆ ಗೇಟ್ ವರೆಗೆ ತೆರೆದ ವಾಹನದಲ್ಲಿ ಯಡಿಯೂರಪ್ಪ ಅವರ ಮೆರವಣಿಗೆ ನಡೆಯಲಿದ್ದು, ಸಾವಿರಾರು ಮಹಿಳೆಯರು ಕುಂಭಮೇಳದೊಂದಿಗೆ ಬರಮಾಡಿಕೊಳ್ಳಲಿದ್ದಾರೆ.

ನಾಳೆ (ಮೇ 8) ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅವರಿಗಾಗಿ ವೇದಿಕೆಯ ಹಿಂಭಾಗದಲ್ಲೇ ವಿಶೇಷ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಮಠಾಧೀಶರು, ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ವೇದಿಕೆಯಲ್ಲಿ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬರುವ ಲಕ್ಷಾಂತರ ಜನರಿಗಾಗಿ ಕುಡಿಯುವ ನೀರು, ಬಾಳೆಹಣ್ಣು ಮತ್ತು ಉಪಾಹಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More