ಬಿಎಸ್​​​ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್​ ಜೋಶಿ

Edited By:

Updated on: May 09, 2026 | 9:18 PM

ಚಿತ್ರದುರ್ಗದಲ್ಲಿ ಇಂದು ನಡೆದ ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, 21 ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮೊದಲು ಕರ್ನಾಟಕದಲ್ಲೂ ಬಿಜೆಪಿ ಆಡಳಿತ ಇತ್ತು. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಚಿತ್ರದುರ್ಗ, ಮೇ 09: ಕರ್ನಾಟಕದಲ್ಲಿ ಮುಂದೆ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಎಸ್​ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 21ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದರು. ರೈತರಿಗೆ ‌ನ್ಯಾಯ ಒದಗಿಸಿದ ರಾಜಾಹುಲಿ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪರವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು. ಇನ್ನು ಇಂದಿನ ಹೋರಾಟ ಸಾಮಾಜಿಕ ಜಾಲತಾಣಕ್ಕೆ‌ ಸೀಮಿತ ಆಗಿದೆ. ಆದರೆ ಹೋರಾಟಕ್ಕೆ ಹೊಸ ಪರಿಕಲ್ಪನೆ ಕೊಟ್ಟಿದ್ದು ಬಿಎಸ್​ ಯಡಿಯೂರಪ್ಪ ಅವರು. ನಾವೆಲ್ಲಾ ಅವರಿಂದ ಪ್ರೇರಣೆ ಪಡೆಯಬೇಕು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More