Padma Awards 2022: ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸದಿರಲು ಬುದ್ಧದೇವ್​ ಭಟ್ಟಾಚಾರ್ಯ ನಿರ್ಧಾರ

ಪದ್ಮಭೂಷಣ ಪ್ರಶಸ್ತಿ ಬಗ್ಗೆ ನನಗೆ ಯಾರೂ, ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ಪ್ರಶಸ್ತಿ ನೀಡಿದ್ದರೆ ತಿರಸ್ಕರಿಸ್ತೇನೆ ಎಂದು ಬುದ್ಧದೇವ್ ಭಟ್ಟಾಚಾರ್ಯರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

TV9kannada Web Team

| Edited By: ganapathi bhat

Jan 26, 2022 | 9:19 AM

ದೆಹಲಿ: ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸದಿರಲು ಬುದ್ಧದೇವ್​ ಭಟ್ಟಾಚಾರ್ಯ ನಿರ್ಧಾರ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸದಿರಲು ನಿರ್ಧಾರ ಮಾಡಿದ್ದಾರೆ. ಪ್ರಶಸ್ತಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪ್ರಶಸ್ತಿ ತಿರಸ್ಕಾರ ಮಾಡಿದ್ದಾರೆ. ನನಗೆ ಪದ್ಮಭೂಷಣ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಪದ್ಮಭೂಷಣ ಪ್ರಶಸ್ತಿ ಬಗ್ಗೆ ನನಗೆ ಯಾರೂ, ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ಪ್ರಶಸ್ತಿ ನೀಡಿದ್ದರೆ ತಿರಸ್ಕರಿಸ್ತೇನೆ ಎಂದು ಬುದ್ಧದೇವ್ ಭಟ್ಟಾಚಾರ್ಯರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು ಕನ್ನಡಕವಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪುರಸ್ಕಾರ ಸಂದಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಹೆಲಿಕಾಪ್ಟರ್​ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಸಿಬ್ಬಂದಿ ಮುಖ್ಯಸ್ಥ (Chief of Defence Staff – CDS) ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಕೇಂದ್ರ ಸರ್ಕಾರವು ಮರಣೋತ್ತರ ಪದ್ಮವಿಭೂಷಣ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಬಭೂಷಣ ಪುರಸ್ಕಾರ ಸಂದಿದೆ. ಗಾಯಕ ಸೋನು ನಿಗಮ್ ಅವರಿಗೆ ಪದ್ಮಶ್ರೀ ಪುರಸ್ಕಾರ ಸಂದಿದೆ. ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್​ ಸಿಇಒ ಸತ್ಯ ನಾದೆಳ್ಳ ಸೇರಿದಂತೆ 128 ಸಾಧಕರಿಗೆ ಪದ್ಮ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ. ಈ ವರ್ಷ ಒಂದು ಜೋಡಿಗೆ ಪ್ರಶಸ್ತಿ ಸೇರಿದಂತೆ 128 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ (ಒಂದು ಜೋಡಿಯನ್ನು ಒಂದು ಪ್ರಶಸ್ತಿ ಎಂದೇ ಗಣನೆಗೆ ತೆಗೆದುಕೊಳ್ಳಲಾಗುವುದು). ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ . ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.

ಇದನ್ನೂ ಓದಿ: Padma Awards 2022: ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ತಯಾರಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಇದನ್ನೂ ಓದಿ: Padma awards 2022: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Follow us on

Click on your DTH Provider to Add TV9 Kannada