Video: ಬಡಗಾಮ್​ನಲ್ಲಿ ಡಂಪರ್​ ಟ್ರಕ್​ಗೆ ಟಾಟಾ ಸುಮೊ ಡಿಕ್ಕಿ, ನಾಲ್ವರು ಸಾವು, 7 ಮಂದಿಗೆ ಗಾಯ

Updated on: Nov 16, 2025 | 11:44 AM

ಜಮ್ಮು ಮತ್ತು ಕಾಶ್ಮೀರದ ಬಡಗಾಮ್​ನಲ್ಲಿ ಟಾಟಾ ಸುಮೊ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸುಮೋದಲ್ಲಿದ್ದ ಒಂಬತ್ತು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ನಾಲ್ವರನ್ನು ಕರೆತರುವಾಗಲೇ ಸಾವನ್ನಪ್ಪಿದ್ದರು ಎಂದು ಘೋಷಿಸಲಾಯಿತು. ಮೃತರನ್ನು 10 ವರ್ಷದ ಜೈನಾಬ್, 40 ವರ್ಷದ ನಿಸಾರ್ ಅಹ್ಮದ್ ರಾಥರ್, 36 ವರ್ಷದ ಬಶೀರ್ ಅಹ್ಮದ್ ರಾಥರ್ ಮತ್ತು 60 ವರ್ಷದ ಖಾತೂನ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಮಹ್ವಾರಾ ನಿವಾಸಿಗಳು.

ಬಡಗಾಮ್, ನವೆಂಬರ್ 16: ಜಮ್ಮು ಮತ್ತು ಕಾಶ್ಮೀರದ ಬಡಗಾಮ್​ನಲ್ಲಿ ಟಾಟಾ ಸುಮೊ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸುಮೋದಲ್ಲಿದ್ದ ಒಂಬತ್ತು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ನಾಲ್ವರನ್ನು ಕರೆತರುವಾಗಲೇ ಸಾವನ್ನಪ್ಪಿದ್ದರು ಎಂದು ಘೋಷಿಸಲಾಯಿತು. ಮೃತರನ್ನು 10 ವರ್ಷದ ಜೈನಾಬ್, 40 ವರ್ಷದ ನಿಸಾರ್ ಅಹ್ಮದ್ ರಾಥರ್, 36 ವರ್ಷದ ಬಶೀರ್ ಅಹ್ಮದ್ ರಾಥರ್ ಮತ್ತು 60 ವರ್ಷದ ಖಾತೂನ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಮಹ್ವಾರಾ ನಿವಾಸಿಗಳು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More