ಶತಮಾನಗಳ ತ್ಯಾಗದ ಪ್ರತಿಫಲ; ರಾಮ ಮಂದಿರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಕುರಿತು ಪ್ರಧಾನಿ ಮೋದಿ

ಶತಮಾನಗಳ ತ್ಯಾಗದ ಪ್ರತಿಫಲ; ರಾಮ ಮಂದಿರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಕುರಿತು ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on: Jan 11, 2025 | 3:15 PM

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಅಭಿನಂದಿಸಿದ್ದಾರೆ. ತಮ್ಮ ಸಂದೇಶದಲ್ಲಿ ಪ್ರಧಾನಿ ಮೋದಿ ಅವರು ಈ ದೇವಾಲಯವನ್ನು ‘ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ನಿರ್ಮಿಸಲಾಗಿದೆ’ ಎಂದು ಹೇಳಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಲಾಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಸಂದೇಶವನ್ನು ಹಂಚಿಕೊಂಡ ಪ್ರಧಾನಿ ಮೋದಿ, ಶತಮಾನಗಳ ತ್ಯಾಗದ ನಂತರ ನಿರ್ಮಿಸಲಾದ ಈ ದೇವಾಲಯವು ಭಾರತದ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೇಷ್ಠ ಪರಂಪರೆಯಾಗಿದೆ ಎಂದು ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ನಿರ್ಮಿಸಲಾದ ಈ ದೇವಾಲಯವು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೇಷ್ಠ ಪರಂಪರೆಯಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ಈ ದೈವಿಕ ಮತ್ತು ಭವ್ಯವಾದ ರಾಮ ಮಂದಿರವು ಒಂದು ದೊಡ್ಡ ಸ್ಫೂರ್ತಿಯಾಗಲಿದೆ ಎಂದು ನನಗೆ ವಿಶ್ವಾಸವಿದೆ ಎಂದು ಮೋದಿ ಎಕ್ಸ್​ನಲ್ಲಿ ಸಂದೇಶ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ