Video: ಟ್ರಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ, 8 ಮಂದಿ ಸಾವು, 45ಕ್ಕೂ ಅಧಿಕ ಮಂದಿಗೆ ಗಾಯ

Updated on: Aug 25, 2025 | 7:39 AM

ಬುಲಂದ್‌ಶಹರ್‌ನ ರಾಷ್ಟ್ರೀಯ ಹೆದ್ದಾರಿ 34 ರಲ್ಲಿ ಭಕ್ತರಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸಾವನ್ನಪ್ಪಿದ್ದು, 45 ಜನರು ಗಾಯಗೊಂಡಿದ್ದಾರೆ. ಗೋಗಾಜಿ ಭಕ್ತರು ಉತ್ತರ ಪ್ರದೇಶದ ಕಾಸ್ಗಂಜ್‌ನಿಂದ ರಾಜಸ್ಥಾನದ ಗೋಗಮೇಡಿಗೆ ಹೋಗುತ್ತಿದ್ದಾಗ ಘಾಟಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಎಸ್‌ಪಿ ಸೇರಿದಂತೆ ಪೊಲೀಸ್ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿವೆ.

ಉತ್ತರ ಪ್ರದೇಶ, ಆಗಸ್ಟ್​ 25: ಬುಲಂದ್‌ಶಹರ್‌ನ ರಾಷ್ಟ್ರೀಯ ಹೆದ್ದಾರಿ 34 ರಲ್ಲಿ ಭಕ್ತರಿದ್ದ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸಾವನ್ನಪ್ಪಿದ್ದು, 45 ಜನರು ಗಾಯಗೊಂಡಿದ್ದಾರೆ. ಗೋಗಾಜಿ ಭಕ್ತರು ಉತ್ತರ ಪ್ರದೇಶದ ಕಾಸ್ಗಂಜ್‌ನಿಂದ ರಾಜಸ್ಥಾನದ ಗೋಗಮೇಡಿಗೆ ಹೋಗುತ್ತಿದ್ದಾಗ ಘಾಟಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಎಸ್‌ಪಿ ಸೇರಿದಂತೆ ಪೊಲೀಸ್ ತಂಡಗಳು ಅಪಘಾತ ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನೆರವು ನೀಡಲಾಗಿದೆ.ಬೆಳಗಿನ ಜಾವ 2.15ರ ಸುಮಾರಿಗೆ ಘಟನೆ ನಡೆದಿದೆ.ಸುಮಾರು 60-61 ಜನರು ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ