AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಿತೀಶ್ ಕುಮಾರ್​ ಹೆಲಿಕಾಪ್ಟರ್ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಸಿಎಂ ನಿತೀಶ್ ಕುಮಾರ್​ ಹೆಲಿಕಾಪ್ಟರ್ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಸುಷ್ಮಾ ಚಕ್ರೆ
|

Updated on: Mar 14, 2026 | 4:56 PM

Share

ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಮುನ್ನ ಬೇಗುಸರೈ ಮೈದಾನಕ್ಕೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಜೀವ ಉಳಿಸಿಕೊಳ್ಳಲು ಪೊಲೀಸರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಮುಖ್ಯಮಂತ್ರಿ ಆಗಮನಕ್ಕೂ ಮುನ್ನ ಸ್ಥಳವನ್ನು ಸುರಕ್ಷಿತಗೊಳಿಸಲಾಗಿತ್ತು. ಹೆಲಿಪ್ಯಾಡ್ ಪ್ರದೇಶವು ಬಿದಿರಿನ ಬ್ಯಾರಿಕೇಡ್‌ಗಳಿಂದ ಸುತ್ತುವರೆದಿತ್ತು. ಅಧಿಕೃತ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೂ ಹೇಗೋ ಗೂಳಿ ಎಂಟ್ರಿ ಕೊಟ್ಟಿದೆ. ಈ ಘಟನೆಯ ಸಮಯದಲ್ಲಿ ಯಾರಿಗೂ ಗಾಯವಾಗದಿದ್ದರೂ, ಅನಿರೀಕ್ಷಿತವಾಗಿ ಒಳಗೆ ನುಗ್ಗಿದ ಗೂಳಿ ಹೆಲಿಪ್ಯಾಡ್‌ನಲ್ಲಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪಾಟ್ನಾ, ಮಾರ್ಚ್ 14: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಆಗಮನಕ್ಕೂ ಮೊದಲು ಬೇಗುಸರೈನಲ್ಲಿರುವ ಹೆಲಿಪ್ಯಾಡ್‌ನೊಳಗೆ ನುಗ್ಗಿದ ಗೂಳಿ ಕೆಲಕಾಲ ಆತಂಕ ಸೃಷ್ಟಿಸಿತು. ಸಮೃದ್ಧಿ ಯಾತ್ರೆಯ ಭಾಗವಾಗಿ ಸಿಎಂ ಭೇಟಿಗೆ ಸಿದ್ಧತೆ ನಡೆಸುತ್ತಿದ್ದಾಗ ನಡೆದ ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಹೆಲಿಪ್ಯಾಡ್​​ಗೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಇದರಿಂದ ಹೆದರಿದ ಪೊಲೀಸರು ಜೀವ ಉಳಿಸಿಕೊಳ್ಳಲು ಮೈದಾನದಿಂದ ಹೊರಗೆ ಓಡಿದ್ದಾರೆ. ಮುಖ್ಯಮಂತ್ರಿ ಆಗಮನಕ್ಕೂ ಮುನ್ನ ಸ್ಥಳವನ್ನು ಸುರಕ್ಷಿತಗೊಳಿಸಲಾಗಿತ್ತು.

ಹೆಲಿಪ್ಯಾಡ್ ಪ್ರದೇಶವು ಬಿದಿರಿನ ಬ್ಯಾರಿಕೇಡ್‌ಗಳಿಂದ ಸುತ್ತುವರೆದಿತ್ತು. ಅಧಿಕೃತ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೂ ಹೇಗೋ ಗೂಳಿ ಎಂಟ್ರಿ ಕೊಟ್ಟಿದೆ. ಈ ಘಟನೆಯ ಸಮಯದಲ್ಲಿ ಯಾರಿಗೂ ಗಾಯವಾಗದಿದ್ದರೂ, ಅನಿರೀಕ್ಷಿತವಾಗಿ ಒಳಗೆ ನುಗ್ಗಿದ ಗೂಳಿ ಹೆಲಿಪ್ಯಾಡ್‌ನಲ್ಲಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us