ಉತ್ತರ ಪ್ರದೇಶದಲ್ಲಿ ಕೆಡವಲಾದ ಮಸೀದಿ ಕೆಳಗೆ 20 ಅಡಿ ಆಳದ ಬಾವಿ ಪತ್ತೆ

Updated on: Sep 06, 2026 | 12:47 PM

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಬುಲ್ಡೋಜರ್ ಕಾರ್ಯಾಚರಣೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಸುಮಾರು 70 ವರ್ಷ ಹಳೆಯ ಮಸೀದಿಯನ್ನು ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಶನಿವಾರ ನೆಲಸಮಗೊಳಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಸ್ಥಳದಲ್ಲಿದ್ದ ಕಲ್ಲು-ಮಣ್ಣಿನ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾಗ ಬೃಹತ್ ಸಿಮೆಂಟ್ ಸ್ಲ್ಯಾಬ್ ಕೆಳಗೆ ಸುಮಾರು 20 ಅಡಿ ಆಳದ ಪುರಾತನ ಇಟ್ಟಿಗೆ ಬಾವಿಯೊಂದು ಪತ್ತೆಯಾಗಿದ್ದು, ಎಲ್ಲರಲ್ಲೂ ಭಾರೀ ಕುತೂಹಲ ಮೂಡಿಸಿದೆ.

ಸಹರಾನ್​ಪುರ, ಸೆಪ್ಟೆಂಬರ್ 06: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಬುಲ್ಡೋಜರ್ ಕಾರ್ಯಾಚರಣೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಸುಮಾರು 70 ವರ್ಷ ಹಳೆಯ ಮಸೀದಿಯನ್ನು ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಶನಿವಾರ ನೆಲಸಮಗೊಳಿಸಲಾಗಿತ್ತು. ಆದರೆ, ಭಾನುವಾರ ಬೆಳಗ್ಗೆ ಸ್ಥಳದಲ್ಲಿದ್ದ ಕಲ್ಲು-ಮಣ್ಣಿನ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾಗ ಬೃಹತ್ ಸಿಮೆಂಟ್ ಸ್ಲ್ಯಾಬ್ ಕೆಳಗೆ ಸುಮಾರು 20 ಅಡಿ ಆಳದ ಪುರಾತನ ಇಟ್ಟಿಗೆ ಬಾವಿಯೊಂದು ಪತ್ತೆಯಾಗಿದ್ದು, ಎಲ್ಲರಲ್ಲೂ ಭಾರೀ ಕುತೂಹಲ ಮೂಡಿಸಿದೆ.

ಈ ಬಾವಿಯ ಪ್ರಾಚೀನತೆ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಪತ್ತೆಹಚ್ಚಲು ಸ್ಥಳೀಯ ಆಡಳಿತವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI) ಮಾಹಿತಿ ರವಾನಿಸಿದೆ. ಇತ್ತ ಈ ಘಟನೆ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಸೃಷ್ಟಿಸಿದೆ. ಕಲೆಕ್ಟರೇಟ್ ನಿರ್ಮಾಣಕ್ಕೂ ಮೊದಲೇ ಈ ಧಾರ್ಮಿಕ ಕಟ್ಟಡವಿತ್ತು ಎಂದು ಆರೋಪಿಸಿರುವ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಮತ್ತು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್, ಆಡಳಿತದ ಆತುರದ ಬುಲ್ಡೋಜರ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಸಮಾಜವಾದಿ ಪಕ್ಷದ ನಿಯೋಗವೂ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More