ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!

Updated on: Feb 24, 2026 | 10:25 AM

ಬೆಂಗಳೂರಿನ ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ ವಿಫಲವಾಗಿದೆ. ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ ಆರೋಪಿ ಸಿಸಿಟಿವಿ ವೈರ್ ಕತ್ತರಿಸಿದಾಗ ಅಲಾರಾಂ ಮೊಳಗಿದೆ. ಇದು ಕಳ್ಳನನ್ನು ಓಡಿಸಿದೆ. ಇದೇ ರೀತಿ ಹನುಸೂರು ಗೇಟ್ ಬಳಿ ಎಚ್‌ಡಿಎಫ್‌ಸಿ ಎಟಿಎಂ ದರೋಡೆ ಯತ್ನವೂ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು, ಫೆಬ್ರವರಿ 24: ಬೆಂಗಳೂರಿನ ಶೇಷಾದ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ ವಿಫಲವಾಗಿದೆ. ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬ್ಯಾಂಕ್‌ನ ಎಡಭಾಗದಲ್ಲಿದ್ದ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ್ದಾರೆ. ಬ್ಯಾಂಕ್‌ನೊಳಗಡೆ ಪ್ರವೇಶಿಸಿದ ಆರೋಪಿ ಸಿಸಿಟಿವಿ ವೈರ್‌ಗಳನ್ನು ಕತ್ತರಿಸಲು ಪ್ರಯತ್ನಿಸಿದಾಗ ಅಲಾರಾಂ ಮೊಳಗಿದೆ. ಅಲಾರಾಂ ಶಬ್ದ ಕೇಳಿದ ತಕ್ಷಣ ಕಳ್ಳ ಗಾಬರಿಯಾಗಿ ಬಂದ ದಾರಿಯಲ್ಲೇ ಪರಾರಿಯಾಗಿದ್ದಾನೆ. ಬ್ಯಾಂಕ್‌ನ ಭದ್ರತಾ ಸಿಬ್ಬಂದಿ ಅಲಾರಾಂ ಮೊಳಗಿದಾಗ ಪರಿಶೀಲಿಸಿದ್ದರೂ, ಕಿಟಕಿಯ ಬಳಿ ಹೋಗಿ ನೋಡದೆ ನಿರ್ಲಕ್ಷಿಸಿದ್ದಾರೆ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಬಂದು ನೋಡಿದಾಗ ಕಳ್ಳತನ ಯತ್ನದ ಬಗ್ಗೆ ತಿಳಿದುಬಂದಿದೆ.

ಮಾಹಿತಿ ಪಡೆದ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More