ಪಟಾಕಿ ಸಿಡಿಸಲು ಸಮಯ ನಿಗದಿ: ಮೀರಿದ್ರೆ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಸಚಿವರು

Edited By:

Updated on: Oct 30, 2026 | 2:52 PM

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದೆ. ಸುಪ್ರೀಂಕೋರ್ಟ್​ ಗೈಡ್​​ಲೈನ್ಸ್​​ ಪಾಲನೆ ಮಾಡಬೇಕು. ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು, (ಅಕ್ಟೋಬರ್ 30): ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದೆ. ಸುಪ್ರೀಂಕೋರ್ಟ್​ ಗೈಡ್​​ಲೈನ್ಸ್​​ ಪಾಲನೆ ಮಾಡಬೇಕು. ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಆದೇಶಗಳ ಅನ್ವಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್‌‍ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಗೋದಾಮುಗಳನ್ನು ಪರಿಶೀಲನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More