ಶ್ರೀನಿವಾಸಪುರ ಬಳಿ ಭೀಕರ ಬಸ್ ಅಪಘಾತ: ಮಹಿಳೆ ಸಾವು, ಹಲವರಿಗೆ ಗಾಯ
ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಆಂಧ್ರದ ಬದ್ವೇಲ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಶ್ರೀನಿವಾಸಪುರ ಹಾಗೂ ಮದನಪಲ್ಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕೋಲಾರ, ಡಿಸೆಂಬರ್ 02: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಭೀಕರ ಬಸ್ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಆಂಧ್ರದ ಪೊದಟೂರು ಗ್ರಾಮದ ನಿವಾಸಿ ಅನಿತಾ (58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರದ ಬದ್ವೇಲ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತವಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಮತ್ತು ಆಂಧ್ರದ ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

