ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಕಾಣಿಸಿಕೊಂಡ ಎದೆನೋವು; ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬೆಂಗಳೂರಿನ ನಾಗವಾರ-ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಘಟನೆ ನಡೆದಾಗ ಕೇವಲ ನಾಲ್ವರು ಮಾತ್ರ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು.
ಬೆಂಗಳೂರು: ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲೆ ಸಂಚರಿಸಿತು. ಬೆಂಗಳೂರಿನ ನಾಗವಾರ-ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಘಟನೆ ನಡೆದಾಗ ಕೇವಲ ನಾಲ್ವರು ಮಾತ್ರ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಬಾಣಸವಾಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಸ್ವಸ್ಥ ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:
ಹೃದಯಾಘಾತದಿಂದ ಮೃತಪಟ್ಟರೂ ಬಸ್ ಚಾಲಕನಿಗೆ ಪರಿಹಾರ; ಹೈಕೋರ್ಟ್ ಮಹತ್ವದ ಆದೇಶ
ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್; ಒಂದು ವರ್ಷದ ಮಗು ಸೇರಿ ಮೂವರು ಸಾವು