ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಿದ್ದ ಬಸ್​: ಅದೃಷ್ಟವಶಾತ್ ಪ್ರಯಾಣಿಕರು ಬಚಾವ್

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಿದ್ದ ಬಸ್​: ಅದೃಷ್ಟವಶಾತ್ ಪ್ರಯಾಣಿಕರು ಬಚಾವ್

TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 26, 2022 | 8:54 PM

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಸ್​ ಬಿದ್ದಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ನಡೆದಿದೆ.

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಸ್​ ಬಿದ್ದಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ  ನಡೆದಿದೆ. ಇಂದು(ನ.26) ಸಿಗಂದೂರು ದೇವಿಯ ದರ್ಶನಕ್ಕೆ ಪ್ರಯಾಣಿಕರು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು,  ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ಘಟನೆ ನಡೆಯುತ್ತಿದಂತೆ ಬಸ್​ನಲ್ಲಿದ್ದ ಕೆಲ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಹಿಟಾಚಿ ಮೂಲಕ ಬಸ್ ಮೇಲೆತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Nov 26, 2022 08:45 PM