ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಿದ್ದ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಬಚಾವ್
ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಸ್ ಬಿದ್ದಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ನಡೆದಿದೆ.
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಬಸ್ ಬಿದ್ದಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ನಡೆದಿದೆ. ಇಂದು(ನ.26) ಸಿಗಂದೂರು ದೇವಿಯ ದರ್ಶನಕ್ಕೆ ಪ್ರಯಾಣಿಕರು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಘಟನೆ ನಡೆಯುತ್ತಿದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಹಿಟಾಚಿ ಮೂಲಕ ಬಸ್ ಮೇಲೆತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Nov 26, 2022 08:45 PM