AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ: ಬಿಗ್ ಅಪ್ಡೇಟ್ ನೀಡಿದ ಸಾರಿಗೆ ಸಚಿವ ಭೈರತಿ ಸುರೇಶ್

ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ: ಬಿಗ್ ಅಪ್ಡೇಟ್ ನೀಡಿದ ಸಾರಿಗೆ ಸಚಿವ ಭೈರತಿ ಸುರೇಶ್

ರಮೇಶ್ ಬಿ. ಜವಳಗೇರಾ
|

Updated on: Oct 29, 2026 | 5:34 PM

Share

ಹಾಲಿನ ಜೊತೆಗೆ ಇಂದಿನ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಗ್ಗೆಯೂ ಚರ್ಚೆಯಾಗಿದೆ. ಆದ್ರೆ, ಸಂಪುಟ ಟಿಕೆಟ್ ದರ ಏರಿಕೆಯನ್ನು ಸಾರಿಗೆ ಇಲಾಖೆಗೆ ಬಿಡಲಾಗಿದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಭೈರತಿ ಸುರೇಶ್, ಈಗಾಗಲೇ ನಾವು ಬಸ್ ಪ್ರಯಾಣದ ದರ ಹೆಚ್ಚಳ ಮಾಡಬೇಕು ಅಂತ ತೀರ್ಮಾನ ಮಾಡಿದ್ವಿ. ಇಂದು ಸಿಎಂ‌ ಅವರು ಎಲ್ಲರ ಜೊತೆ ಚರ್ಚೆ ಮಾಡಿದ್ರು. ದರ ಏರಿಕೆ ಬಗ್ಗೆ ಸಿಎಂ ಅವರು ಸಾರಿಗೆ ಇಲಾಖೆಯವರೆ ಕ್ರಮಕೈಗೊಳ್ಳಿ ಅಂತ ಹೇಳಿದ್ದಾರೆ.

ಬೆಂಗಳೂರು, (ಅಕ್ಟೋಬರ್ 29): ಹಾಲಿನ ಜೊತೆಗೆ ಇಂದಿನ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಗ್ಗೆಯೂ ಚರ್ಚೆಯಾಗಿದೆ. ಆದ್ರೆ, ಸಂಪುಟ ಟಿಕೆಟ್ ದರ ಏರಿಕೆಯನ್ನು ಸಾರಿಗೆ ಇಲಾಖೆಗೆ ಬಿಡಲಾಗಿದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಭೈರತಿ ಸುರೇಶ್, ಈಗಾಗಲೇ ನಾವು ಬಸ್ ಪ್ರಯಾಣದ ದರ ಹೆಚ್ಚಳ ಮಾಡಬೇಕು ಅಂತ ತೀರ್ಮಾನ ಮಾಡಿದ್ವಿ. ಇಂದು ಸಿಎಂ‌ ಅವರು ಎಲ್ಲರ ಜೊತೆ ಚರ್ಚೆ ಮಾಡಿದ್ರು. ದರ ಏರಿಕೆ ಬಗ್ಗೆ ಸಿಎಂ ಅವರು ಸಾರಿಗೆ ಇಲಾಖೆಯವರೆ ಕ್ರಮಕೈಗೊಳ್ಳಿ ಅಂತ ಹೇಳಿದ್ದಾರೆ. ಹೀಗಾಗಿ ನಾನು ಸಾರಿಗೆ ಇಲಾಖೆ ಸೆಕ್ರೆಟರಿ ಸೇರಿದಂತೆ ನಾಲ್ಕು ನಿಗಮದ ಎಂಡಿಗಳ ಜೊತೆ ನವೆಂಬರ್ 3ರಂದು ಸಭೆ ನಡೆಸುತ್ತೇನೆ. ಎಷ್ಟು ದರ ಜಾಸ್ತಿ ಮಾಡಬಹುದು ಅಂತ ಆಮೇಲೆ ನಿರ್ಧಾರ ಮಾಡುತ್ತೇವೆ. ಬಳಿಕ ನವೆಂಬರ್ 4 ರಂದು ನಾನೇ ಸುದ್ದಿಗೋಷ್ಟಿ ಮಾಡಿ ಟಿಕೆಟ್ ದರ ಹೆಚ್ಚಳ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More