AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ಸಿಎಂ, ಸಚಿವರ ಮುಖವಾಡ ಧರಿಸಿ ಭಿಕ್ಷಾಟನೆ

ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ಸಿಎಂ, ಸಚಿವರ ಮುಖವಾಡ ಧರಿಸಿ ಭಿಕ್ಷಾಟನೆ

ಕಿರಣ್​ ಹನಿಯಡ್ಕ
| Edited By: |

Updated on: Nov 05, 2026 | 1:28 PM

Share

ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ನಾಯಕರು ಆರ್‌ ಅಶೋಕ್ ನೇತೃತ್ವದಲ್ಲಿ ಅಣಕು ಭಿಕ್ಷಾಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ದರ ಹೆಚ್ಚಳದಿಂದಾಗಿ ಸಾಮಾನ್ಯ ಪ್ರಯಾಣಿಕರಿಗೆ ತೊಂದರೆ ಆಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು, ನವೆಂಬರ್​​ 05: ಸರ್ಕಾರಿ ಬಸ್​​ಗಳ ಟಿಕೆಟ್​​ ದರ ಏರಿಕೆ ಖಂಡಿಸಿ ಮೆಜೆಸ್ಟಿಕ್​​ನಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ದರ ಹೆಚ್ಚಳದಿಂದಾಗಿ ಸಾಮಾನ್ಯ ಪ್ರಯಾಣಿಕರಿಗೆ ತೊಂದರೆ ಆಗಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಸಿಎಂ ಡಿಕೆಶಿ, ಸಾರಿಗೆ ಸಚಿವ ಭೈರತಿ ಮುಖವಾಡ ಧರಿಸಿ ಭಿಕ್ಷೆ ಎತ್ತುವ ರೀತಿ ಅಣಕು ಮಾಡಿ ಸರ್ಕಾರದ ವಿರುದ್ಧ ಬಿಜೆಪಿಗರು ಕಿಡಿ ಕಾರಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಉಪನಾಯಕ ಬೆಲ್ಲದ್, ಸಂಸದ ಪಿ‌.ಸಿ.ಮೋಹನ್‌, ಶಾಸಕರಾದ ರಘು, ರವಿಸುಬ್ರಹ್ಮಣ್ಯ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More