Video: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್, ಇಬ್ಬರು ಸಾವು
ಬಿಹಾರದ ಮಧುಬನಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾಗಿದೆ. ಇಟಾವಾದ ಸೈಫೈ ಪ್ರದೇಶದಲ್ಲಿ ಬಸ್ ಎಕ್ಸ್‌ಪ್ರೆಸ್‌ವೇಯಿಂದ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ನೇಪಾಳಿ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟಾವಾ ಜಿಲ್ಲೆಯ ಸೈಫೈ ಪ್ರದೇಶದ ಮೈಲಿಗಲ್ಲು 103 ರಲ್ಲಿ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 10 ಮಂದಿ ಸ್ಥಿತಿ ಚಿಂತಾಜನಕವಾಗಿದೆ.
ಬಿಹಾರ,ಜೂನ್ 26: ಬಿಹಾರದ ಮಧುಬನಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾಗಿದೆ. ಇಟಾವಾದ ಸೈಫೈ ಪ್ರದೇಶದಲ್ಲಿ ಬಸ್ ಎಕ್ಸ್‌ಪ್ರೆಸ್‌ವೇಯಿಂದ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ನೇಪಾಳಿ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟಾವಾ ಜಿಲ್ಲೆಯ ಸೈಫೈ ಪ್ರದೇಶದ ಮೈಲಿಗಲ್ಲು 103 ರಲ್ಲಿ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 10 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಗಾಯಾಳುಗಳನ್ನು ಸೈಫೈ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಸೈದಾ ಖಾತುನ್ (22) ಮತ್ತು ಮನೋಜ್ ಕುಮಾರ್ (55) ಎಂದು ಗುರುತಿಸಲಾಗಿದೆ.ಸೈದಾ ಖಾತುನ್ ನೇಪಾಳದ ನಿವಾಸಿಯಾಗಿದ್ದರೆ, ಮನೋಜ್ ಕುಮಾರ್ ಬಿಹಾರದ ದರ್ಭಂಗಾ ನಿವಾಸಿಯಾಗಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ