Video: ಆಗ್ರಾ-ಲಕ್ನೋ ಎಕ್ಸ್​​ಪ್ರೆಸ್​ವೇನಿಂದ ಕೆಳಗೆ ಉರುಳಿದ ಡಬಲ್ ಡೆಕ್ಕರ್ ಬಸ್, ಇಬ್ಬರು ಸಾವು

Updated on: Jun 26, 2025 | 10:00 AM

ಬಿಹಾರದ ಮಧುಬನಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾಗಿದೆ. ಇಟಾವಾದ ಸೈಫೈ ಪ್ರದೇಶದಲ್ಲಿ ಬಸ್ ಎಕ್ಸ್‌ಪ್ರೆಸ್‌ವೇಯಿಂದ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ನೇಪಾಳಿ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟಾವಾ ಜಿಲ್ಲೆಯ ಸೈಫೈ ಪ್ರದೇಶದ ಮೈಲಿಗಲ್ಲು 103 ರಲ್ಲಿ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 10 ಮಂದಿ ಸ್ಥಿತಿ ಚಿಂತಾಜನಕವಾಗಿದೆ.

ಬಿಹಾರ,ಜೂನ್ 26: ಬಿಹಾರದ ಮಧುಬನಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾಗಿದೆ. ಇಟಾವಾದ ಸೈಫೈ ಪ್ರದೇಶದಲ್ಲಿ ಬಸ್ ಎಕ್ಸ್‌ಪ್ರೆಸ್‌ವೇಯಿಂದ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ನೇಪಾಳಿ ಮಹಿಳೆ ಸೇರಿದಂತೆ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟಾವಾ ಜಿಲ್ಲೆಯ ಸೈಫೈ ಪ್ರದೇಶದ ಮೈಲಿಗಲ್ಲು 103 ರಲ್ಲಿ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 10 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲಾ ಗಾಯಾಳುಗಳನ್ನು ಸೈಫೈ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಸೈದಾ ಖಾತುನ್ (22) ಮತ್ತು ಮನೋಜ್ ಕುಮಾರ್ (55) ಎಂದು ಗುರುತಿಸಲಾಗಿದೆ.ಸೈದಾ ಖಾತುನ್ ನೇಪಾಳದ ನಿವಾಸಿಯಾಗಿದ್ದರೆ, ಮನೋಜ್ ಕುಮಾರ್ ಬಿಹಾರದ ದರ್ಭಂಗಾ ನಿವಾಸಿಯಾಗಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More