AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್​​: ಆಸ್ಪತ್ರೆ ಮುಂದೆಯೇ ಅಪಘಾತ!

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್​​: ಆಸ್ಪತ್ರೆ ಮುಂದೆಯೇ ಅಪಘಾತ!

ಸಹದೇವ್​ ಮಾನೆ
| Edited By: |

Updated on: Mar 15, 2026 | 2:42 PM

Share

ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ 11 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಡ್ಡಬಂದ ಕಾರು ತಪ್ಪಿಸಲು ಬಸ್​​ ಚಾಲಕ ಯತ್ನಿಸಿದ್ದು, ಈ ವೇಳೆ ಅಪಘಾತ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಮರಕ್ಕೆ ಗುದ್ದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ, ಮಾರ್ಚ್​​ 15: ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್​ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More