Video: ಆಗ್ರಾ-ಲಕ್ನೋ ಎಕ್ಸ್​ಪ್ರೆಸ್​ ವೇಯಲ್ಲಿ ಬಸ್​-ಟ್ಯಾಂಕರ್​ ನಡುವೆ ಡಿಕ್ಕಿ, ಇಬ್ಬರು ಸಜೀವದಹನ, 15ಕ್ಕೂ ಅಧಿಕ ಮಂದಿಗೆ ಗಾಯ

Updated on: May 22, 2026 | 7:37 AM

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗಿನ ಜಾವ ಬಸ್ಸೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಚಾಲಕ ಸೇರಿ ಇಬ್ಬರು ಸಜೀವದಹನವಾಗಿದ್ದಾರೆ. 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದಿಂದ ಗುರುಗ್ರಾಮಕ್ಕೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ವ್ಯಾಪಕ ಭೀತಿ ಉಂಟಾಗಿದೆ.ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವುದರ ಜೊತೆಗೆ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಫಿರೋಜಾಬಾದ್ ವೈದ್ಯಕೀಯ ಕಾಲೇಜು ಮತ್ತು ಸೈಫೈ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.

ಲಕ್ನೋ, ಮೇ 22: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗಿನ ಜಾವ ಬಸ್ಸೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಚಾಲಕ ಸೇರಿ ಇಬ್ಬರು ಸಜೀವದಹನವಾಗಿದ್ದಾರೆ. 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದಿಂದ ಗುರುಗ್ರಾಮಕ್ಕೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ವ್ಯಾಪಕ ಭೀತಿ ಉಂಟಾಗಿದೆ.ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರುವುದರ ಜೊತೆಗೆ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಫಿರೋಜಾಬಾದ್ ವೈದ್ಯಕೀಯ ಕಾಲೇಜು ಮತ್ತು ಸೈಫೈ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More