ಆಕಸ್ಮಿಕ ಬೆಂಕಿ: ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ಗಳು ಬೆಂಕಿಗಾಹುತಿ, ವಿಡಿಯೋ ವೈರಲ್
ನಿಲ್ಲಿಸಿಟ್ಟಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 5 ಬಸ್ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಂಗಳೂರು, ಜೂ.29: ನಿಲ್ಲಿಸಿಟ್ಟಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 5 ಬಸ್ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಹಳೆ ಬಸ್ಗಳು ಕೆಟ್ಟೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2.40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲ ನಗರ ಪೊಲೀಸರಿಗೆ ಕಾಲೇಜು ಮಂಡಳಿ ಕರೆ ಮಾಡಿದ್ದರು. ಈ ಕುರಿತು ಪೊಲೀಸರು ತನಿಖೆ ಅರಂಭಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos