ಆಕಸ್ಮಿಕ ಬೆಂಕಿ: ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ, ವಿಡಿಯೋ ವೈರಲ್​

|

Updated on: Jun 29, 2024 | 4:46 PM

ನಿಲ್ಲಿಸಿಟ್ಟಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 5 ಬಸ್​ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಗಳೂರು, ಜೂ.29: ನಿಲ್ಲಿಸಿಟ್ಟಿದ್ದ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 5 ಬಸ್​ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಹಳೆ ಬಸ್​ಗಳು ಕೆಟ್ಟೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2.40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ನಡೆದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲ ನಗರ ಪೊಲೀಸರಿಗೆ ಕಾಲೇಜು ಮಂಡಳಿ ಕರೆ ಮಾಡಿದ್ದರು. ಈ ಕುರಿತು ಪೊಲೀಸರು ತನಿಖೆ ಅರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on