ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

Edited By:

Updated on: May 08, 2026 | 11:35 AM

ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಪ್ಪಳ, ಮೇ 08: ಬಂಗಾರದ ಬೆಲೆ ಗಗನಕ್ಕೇರಿದರೂ ಬರೋಬ್ಬರಿ 2.50 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ದೇಣಿಗೆ ನೀಡಿದ್ದಾರೆ. ಎಎಂಆರ್ (AMR) ಗ್ರೂಪ್ ಅಧ್ಯಕ್ಷ ಎ. ಮಹೇಶ್ ರೆಡ್ಡಿ ನೇತೃತ್ವದಲ್ಲಿ ಬಂಗಾರದ ಪ್ರಭಾವಳಿ, ಕಿರೀಟ ಹಾಗೂ ಗದೆ ಅರ್ಪಣೆ ಮಾಡಲಾಗಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮೀ ಸಹ ಈ ವೇಳೆ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಿರುಪತಿ ಮಾದರಿಯಲ್ಲಿ ದೇವಸ್ಥಾನ ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಈ ದೇಣಿಗೆ ನೀಡಲಾಗಿದೆ. ಹೈದರಾಬಾದ್‌ನ ನೆಲ್ಲೂರು ಮೂಲದ ಉದ್ಯಮಿ ಮಹೇಶ್ ರೆಡ್ಡಿ ಈಗಾಗಲೇ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೂ 140 ಕೆಜಿ ಬಂಗಾರ ದೇಣಿಗೆ ನೀಡಿದ್ದು, ಅಂಜನಾದ್ರಿಗೆ ಇದೇ ಮೊದಲ ಕೊಡುಗೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More