Assembly Polls: ಚುನಾವಣಾ ದಿನಾಂಕ ಘೋಷಣೆ, ಚಟುವಟಿಕೆಗಳ ಕೆಂದ್ರವಾದ ಸಿದ್ದರಾಮಯ್ಯ ಮೈಸೂರು ನಿವಾಸ

ಅರುಣ್​ ಕುಮಾರ್​ ಬೆಳ್ಳಿ

Updated on: Mar 29, 2023 | 12:14 PM

ಮುಖಂಡರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಜವಾಬ್ದಾರಿಗಳನ್ನು ಹಂಚಿಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯನವರ (Siddaramaiah) ಮೈಸೂರು ನಿವಾಸ ಚಟುವಟಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ. ವರುಣಾ (Varuna) ಮತ್ತು ಚಾಮುಂಡೇಶ್ವರಿ (Chamundeshwari) ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರ ನಿವಾಸಕ್ಕೆ ಆಗಮಿಸಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಜವಾಬ್ದಾರಿಗಳನ್ನು (responsibilities) ಹಂಚಿಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮುದಾಯದ  ಶಿವಸುಜ್ಞಾನ ಮೂರ್ತಿ ಮಹಾಸ್ವಾಮೀಜಿ ತಮ್ಮ ವಟುಗಳೊಂದಿಗೆ ಅಲ್ಲಿಗೆ ಆಗಮಿಸಿ ಸಿದ್ದರಾಮಯ್ಯರನ್ನು ಭೇಟಿಯಾದರು. ವರುಣಾ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ (Dr Yatindra Siddaramaiah) ಮತ್ತು ಮಾವಿನಹಳ್ಳಿ ಸಿದ್ದೇಗೌಡ ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 29, 2023 12:14 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.