AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು

ಶೋ ರೂಮ್‌ನಿಂದ ಆಚೆ ಬರ್ತಿದ್ದಂತೆಯೇ ಅಪಘಾತ: ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು

Basavaraj Yaraganavi
| Edited By: |

Updated on: Oct 20, 2026 | 4:21 PM

Share

ದಸರಾ ಹಬ್ಬದ ಸಂಭ್ರಮದಲ್ಲಿ ಕಾರನ್ನು ಡೆಲಿವರಿ ಪಡೆದು, ರಸ್ತೆಗಿಳಿಸುವ ವೇಳೆಯೇ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ‌. ಸಾಗರ ನಗರದ ಮಾರುತಿ ಕಾರು ಶೋರೂಮ್‌ ಬಳಿ ಈ ಘಟನೆ ನಡೆದಿದೆ. ಶೋರೂಮ್‌ನಲ್ಲಿ ಹೊಸ ಕಾರನ್ನ ಪಡೆದು, ಹೊರಬರುವ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಶೋರೂಮ್ ಎದುರಿನ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿ, ಬಳಿಕ ರಸ್ತೆಗೆ ನುಗ್ಗಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ.

ಶಿವಮೊಗ್ಗ, (ಅಕ್ಟೋಬರ್ 20): ದಸರಾ ಹಬ್ಬದ ಸಂಭ್ರಮದಲ್ಲಿ ಕಾರನ್ನು ಡೆಲಿವರಿ ಪಡೆದು, ರಸ್ತೆಗಿಳಿಸುವ ವೇಳೆಯೇ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ‌. ಸಾಗರ ನಗರದ ಮಾರುತಿ ಕಾರು ಶೋರೂಮ್‌ ಬಳಿ ಈ ಘಟನೆ ನಡೆದಿದೆ. ಶೋರೂಮ್‌ನಲ್ಲಿ ಹೊಸ ಕಾರನ್ನ ಪಡೆದು, ಹೊರಬರುವ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಶೋರೂಮ್ ಎದುರಿನ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿ, ಬಳಿಕ ರಸ್ತೆಗೆ ನುಗ್ಗಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರಗಳಾಗಿದ್ದು, ಕೂಡಲೇ ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಅಪಘಾತದ ದೃಶ್ಯ ಶೋರೂಮ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi