AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಯಲ್ಲೂ ಚುನಾವಣಾ ಫಲಿತಾಂಶದ ಕುತೂಹಲ: ಟಿವಿ9 ಕನ್ನಡ ವೀಕ್ಷಿಸಿದ ಅತಿಥಿಗಳು

ಮದುವೆ ಮನೆಯಲ್ಲೂ ಚುನಾವಣಾ ಫಲಿತಾಂಶದ ಕುತೂಹಲ: ಟಿವಿ9 ಕನ್ನಡ ವೀಕ್ಷಿಸಿದ ಅತಿಥಿಗಳು

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:May 04, 2026 | 11:47 AM

Share

ದಾವಣಗೆರೆಯಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳು ಟಿವಿ9 ಚಾನೆಲ್ ಮೂಲಕ ಉಪಚುನಾವಣೆ ಫಲಿತಾಂಶಗಳನ್ನು ವೀಕ್ಷಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಸೇರಿದಂತೆ ವಿವಿಧ ಕ್ಷೇತ್ರಗಳ ಮತ ಎಣಿಕೆಯತ್ತ ಜನರ ಗಮನವಿತ್ತು. ದೊಡ್ಡ ಪರದೆಯ ಮೇಲೆ ಫಲಿತಾಂಶಗಳನ್ನು ಪ್ರದರ್ಶಿಸಲಾಗಿದ್ದು, ಇದು ಸಾರ್ವಜನಿಕರ ರಾಜಕೀಯ ಆಸಕ್ತಿಯನ್ನು ತೋರಿಸಿದೆ.

ದಾವಣಗೆರೆ, ಮೇ 04: ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಆಗಮಿಸಿದ್ದ ಅತಿಥಿಗಳು ಟಿವಿ9 ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮತ ಎಣಿಕೆಯ ನೇರಪ್ರಸಾರದ ವೀಕ್ಷಣೆಯಲ್ಲಿ ನಿರತರಾಗಿದ್ದರು. ದಾವಣಗೆರೆ ದಕ್ಷಿಣ, ಬಾಗಲಕೋಟೆ ಹಾಗೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶಗಳನ್ನು ಜನರು ವಿಶೇಷ ಆಸಕ್ತಿಯಿಂದ ವೀಕ್ಷಿಸುತ್ತಿರೋ ದೃಶ್ಯ ಕಂಡುಬಂತು. ಮದುವೆ ಮನೆಯ ಆವರಣದಲ್ಲಿ ಟಿವಿ ಅಳವಡಿಸಲಾಗಿದ್ದು, ಸಾಮಾಜಿಕ ಕಾರ್ಯಕ್ರಮದ ನಡುವೆಯೂ ಚುನಾವಣಾ ಫಲಿತಾಂಶಗಳಿಗೆ ನೀಡಿದ ಗಮನ ರಾಜಕೀಯ ಪ್ರಜ್ಞೆಗೆ ಸಾಕ್ಷಿ ಎಂಬಂತಿತ್ತು.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Published on: May 04, 2026 11:46 AM

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More