ಜೆಪಿ ನಡ್ಡಾ ರಾಜ್ಯದ ಜನತೆಗೆ ಒಡ್ಡಿದ ಬೆದರಿಕೆ ನಿಜವಾಗಿದೆ ಅಂತ ಸಾರಲು ನಾಳೆ ಪ್ರತಿಭಟನೆ ನಡೆಸುತ್ತೇವೆ: ಡಿಕೆ ಶಿವಕುಮಾರ್
ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ವಿರುದ್ಧ ಒಂದು ದೊಡ್ಡ ಷಡ್ಯಂತ್ರ ಹೆಣೆಯುತ್ತಿದೆ, ಅದರ ಬಗ್ಗೆ ತಾವು ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿರುವುದಾಗಿ ಶಿವಕುಮಾರ್ ಹೇಳಿದರು.
ಬೆಂಗಳೂರು: ಅಕ್ಕಿ ಕೊಡುವ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಲತಾಯಿ ಧೋರಣೆ (step motherly treatment) ಅರೋಪಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರತಿಭಟನೆ ನಡೆಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಲಿದ್ದಾರೆ. ತಮ್ಮ ನಿವಾಸದ ಬಳಿ ಪ್ರತಿಭಟನೆ ನಡೆಸುವ ಕುರಿತು ಮಾಧ್ಯಮದವರೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಚುನಾವಣೆ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಒಡ್ಡಿದ ಬೆದರಿಕೆ ನಿಜವಾಗಿದೆ ಅನ್ನೋದನ್ನು ರಾಜ್ಯದ ಜನತೆಗೆ ತಿಳಿಸುವ ಉದ್ದೇಶದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಇದೇ ಸಮಯದಲ್ಲಿ ಮತ್ತೊಂದು ಸಂಗತಿಯ ಪ್ರಸ್ತಾಪ ಮಾಡಿದ ಶಿವಕುಮಾರ್ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ವಿರುದ್ಧ ಒಂದು ದೊಡ್ಡ ಷಡ್ಯಂತ್ರ ಹೆಣೆಯುತ್ತಿದೆ, ಅದರ ಬಗ್ಗೆ ತಾವು ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿದ್ದು, ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದ ಬಳಿಕ ಬಹಿರಂಗಗೊಳಿಸಲಾಗುವುದು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ