ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಪಟ್ಟ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಏನಂದ್ರು ಗೊತ್ತಾ?
ರಾಜ್ಯ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ(BY Vijayendra) ಆಯ್ಕೆ ವಿಚಾರ ‘ ಅದಕ್ಕ ಸ್ವಾಗತವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಹೇಳಿದರು. ‘ಯುವ ನಾಯಕತ್ವಕ್ಕೆ ಅವಕಾಶ ನೀಡಲು ಸೂಕ್ತ ನಿರ್ಧಾರ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ವಿಜಯೇಂದ್ರ ಕೆಲಸ ಮಾಡಲಿದ್ದಾರೆ ಎಂದರು.
ಹುಬ್ಬಳ್ಳಿ, ನ.12: ರಾಜ್ಯ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ(BY Vijayendra) ಆಯ್ಕೆ ವಿಚಾರ ‘ ಅದಕ್ಕ ಸ್ವಾಗತವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಹೇಳಿದರು. ‘ಯುವ ನಾಯಕತ್ವಕ್ಕೆ ಅವಕಾಶ ನೀಡಲು ಸೂಕ್ತ ನಿರ್ಧಾರ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ವಿಜಯೇಂದ್ರ ಕೆಲಸ ಮಾಡಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನ ಗೆಲ್ಲಬೇಕಿದೆ. ವಿಜಯೇಂದ್ರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡುತ್ತೇವೆ. ಪಕ್ಷ ಅಂದ ಮೇಲೆ ಸಣ್ಣಪುಟ್ಟ ಅಸಮಾಧಾನಗಳು ಇರುತ್ತವೆ. ನಾನು ಸಿ.ಟಿ.ರವಿ, ಅರವಿಂದ ಬೆಲ್ಲದ್ ಜೊತೆ ಮಾತನಾಡುತ್ತೇನೆ. ಜಾತಿ ಆಧಾರದ ಮೇಲೆ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಿಲ್ಲ. ಈ ಬಗ್ಗೆ ಕಾಂಗ್ರೆಸ್ ಬಾಲಿಶವಾಗಿ ಮಾತನಾಡುತ್ತಿದೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos