AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಗಿಲು ಹೊತ್ತು ‘ಬಳ್ಳಾರಿ ಚಲೋ’ 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಬಿವೈ ವಿಜಯೇಂದ್ರ

ನೇಗಿಲು ಹೊತ್ತು ‘ಬಳ್ಳಾರಿ ಚಲೋ’ 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಬಿವೈ ವಿಜಯೇಂದ್ರ

ಕಿರಣ್​ ಹನಿಯಡ್ಕ
| Edited By: |

Updated on:Sep 03, 2026 | 12:39 PM

Share

ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರಿನಲ್ಲಿ ಬಿ.ವೈ. ವಿಜಯೇಂದ್ರ ನೇಗಿಲು ಹೊತ್ತು ಪಾದಯಾತ್ರೆಗೆ ಚಾಲನೆ ನೀಡಿದ್ದು, ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಸೆಪ್ಟೆಂಬರ್ 10ರವರೆಗೆ ಬಿಜೆಪಿ ಪಾದಯಾತ್ರೆ ನಡೆಯಲಿದೆ.

ರಾಯಚೂರು, ಸೆಪ್ಟೆಂಬರ್ 3: ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇಗಿಲು ಹೊತ್ತು ಮೂರನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ರಾಯಚೂರಿನ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಆಡಳಿತಾತ್ಮಕ ಲೋಪಗಳು ಹಾಗೂ ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಈ ಪಾದಯಾತ್ರೆ ನಡೆಸುತ್ತಿದೆ. 10 ದಿನಗಳ ಈ ಯಾತ್ರೆ ಸೆಪ್ಟೆಂಬರ್ 10ರವರೆಗೆ ಮುಂದುವರಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 03, 2026 12:30 PM

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More