Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ: ರೈತರ ಸಂಕಷ್ಟ ಸದನದಲ್ಲಿ ಪ್ರಸ್ತಾಪಿಸಿದ ವಿಜಯೇಂದ್ರ ಸಿಎಂ ಸಿದ್ದರಾಮಯ್ಯರನ್ನು ಮನಸಾರೆ ಕೊಂಡಾಡಿದರು

ಬೆಳಗಾವಿ ಅಧಿವೇಶನ: ರೈತರ ಸಂಕಷ್ಟ ಸದನದಲ್ಲಿ ಪ್ರಸ್ತಾಪಿಸಿದ ವಿಜಯೇಂದ್ರ ಸಿಎಂ ಸಿದ್ದರಾಮಯ್ಯರನ್ನು ಮನಸಾರೆ ಕೊಂಡಾಡಿದರು

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 13, 2023 | 1:13 PM

ಬೆಳಗಾವಿಯಲ್ಲಿ ಸುವರ್ಣ ಸೌಧದ ಹೊರಗಡೆ ಬಿಎಸ್ ಯಡಿಯೂರಪ್ಪ ಸಾವಿರಾರು ಕಾರ್ಯಕರ್ತರೊಡನೆ ಸರ್ಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ನಡೆಸುತಿದ್ದರೆ ಸದನದಲ್ಲಿ ಅವರ ಮಗ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಯವಾಗಿ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಪ್ರಜಾಪ್ರಭುತ್ವದ ಸೊಬಗೇ ಅದು, ವಿರೋಧ ಪಕ್ಷ ಬಲಿಷ್ಠವಾಗಿದ್ದರೆ ಸರ್ಕಾರದ ಕೆಲಸವೂ ಚೆನ್ನಾಗಿರುತ್ತದೆ

ಬೆಳಗಾವಿ: ವಿಧಾನಸಭಾ ಅಧಿವೇಶನದಲ್ಲಿ ಇಂದು ಭೀಕರ ಬರಗಾಲದ ಹಿನ್ನೆಲೆಯಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಪ್ರಸ್ತಾಪಿಸಿದ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ಭರಪೂರ ಕೊಂಡಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅನುಭವಿ ನಾಯಕರಲ್ಲಿ ಒಬ್ಬರಾಗಿದ್ದು ಎಸ್ ಎಂ ಕೃಷ್ಣ (SM Krishna) ಅವರ ನಂತರ ಒಂದು ಪೂರ್ಣಾವಧಿಗೆ ರಾಜ್ಯವನ್ನು ನಡೆಸಿದವರು ಮತ್ತು ಇದುವರೆಗೆ ದಾಖಲೆಯ 14 ಬಜೆಟ್ ಗಳನ್ನು ಮಂಡಿಸಿರುವ ಹೆಗ್ಗಳಿಕೆಯುಳ್ಳವರು ಎಂದು ವಿಜಯೇಂದ್ರ ಹೇಳಿದರು. ಈ ಹಿನ್ನೆಲೆಯಲ್ಲಿ ಸಹಜವಾಗೇ ಬರಗಾಲದಿಂದ ತತ್ತರಿಸಿರುವ ರೈತರು ಸಿದ್ದರಾಮಯ್ಯ ಸರ್ಕಾರದತ್ತ ಮುಖ ಮಾಡಿ ನೆರವಿಗಾಗಿ ಎದುರು ನೋಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ವಿರೋಧ ಪಕ್ಷದ ನಾಯಕರು ಬರಗಾಲ ಬಗ್ಗೆ ಚರ್ಚೆ ನಡೆಸಲು ಮುಂದಾದರೆ ಸರ್ಕಾರ ಅದಕ್ಕೆ ಸಿದ್ಧವಿದೆ ಅಂತ ಸಿದ್ದರಾಮಯ್ಯ ಸೋಮವಾರ ಹೇಳಿದ್ದರು. ಸದನದಲ್ಲಿ ಆರೋಗ್ಯಕರ ಚರ್ಚೆ ನಡೆಯುತ್ತಿರವುದು ಕನ್ನಡಿಗರಿಗೆ ಸಂತೋಷ ತಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ