ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್: ಹೇಳಿದ್ದೇನು ನೋಡಿ!
ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಸದಾನಂದ ಗೌಡರೇ ತಮ್ಮ ಧ್ವನಿ ಅಲ್ಲ ಎಂದಿದ್ದಾರೆ. ಹಾಗಾಗಿ ಅದರ ಬಗ್ಗೆ ಹೇಳುವುದೇನೂ ಇಲ್ಲ. ಈ ಬಗ್ಗೆ ಯಾವುದೇ ಸತ್ಯಾಸತ್ಯತೆ ತಿಳಿದಿಲ್ಲದ ಕಾರಣ ಸದ್ಯಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಜುಲೈ 2: ರಾಜ್ಯ ರಾಜಕೀಯ ವಲಯದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ ಎಂದಿದ್ದಾರೆ. ವೈರಲ್ ಆಗಿರುವ ಆಡಿಯೋ ಸಂಭಾಷಣೆ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನು ಕೂಡ ಅಧಿಕೃತವಾಗಿ ದೃಢಪಟ್ಟಿಲ್ಲ. ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ. ಪಕ್ಷದ ಹಿರಿಯ ನಾಯಕರೊಬ್ಬರ ಹೆಸರನ್ನು ಒಳಗೊಂಡಿರುವ ಇಂತಹ ಸೂಕ್ಷ್ಮ ವಿಚಾರದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

