ಬಿಜೆಪಿ ಅಭ್ಯರ್ಥಿ ಪರ ಉಚ್ಚಾಟಿತ ಶಾಸಕ ಯತ್ನಾಳ್​ರನ್ನು ಪ್ರಚಾರಕ್ಕೆ ಕರೆದರಾ ವಿಜಯೇಂದ್ರ! ಹೇಳಿದ್ದೇನು ನೋಡಿ

Edited By:

Updated on: Mar 30, 2026 | 11:24 AM

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಗೆಲುವು ನಿಶ್ಚಿತ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಒಳಗೊಳಗೆ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಎಂಬಿ ಪಾಟೀಲ್ ಅವರ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ಚುನಾವಣೆ ಫಲಿತಾಂಶದ ನಂತರವೇ ಪಕ್ಷಗಳಲ್ಲಿನ ಗುಂಪುಗಾರಿಕೆ ಸ್ಪಷ್ಟವಾಗಲಿದೆ ಎಂದಿದ್ದಾರೆ.

ಬಾಗಲಕೋಟೆ, ಮಾರ್ಚ್ 30: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಬಿವೈ ವಿಜಯೇಂದ್ರ, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದವರೇ ಕೆಲವರು ಒಳಗೊಳಗೆ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡುತ್ತಿದ್ದಾರೆ. ಯಾರೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದರೂ, ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡಿದರೂ ಅದನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.

ಬಿಜೆಪಿಯಲ್ಲಿ 20 ಬಾಗಿಲುಗಳಾಗಿವೆ ಎಂಬ ಸಚಿವ ಎಂಬಿ ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಚುನಾವಣೆ ಫಲಿತಾಂಶ ಬರಲಿ. ಯಾವ ಪಕ್ಷದಲ್ಲಿ ಎಷ್ಟು ಗುಂಪುಗಾರಿಕೆ ಇದೆ ಎಂಬುದು ಆಗ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 30, 2026 11:18 AM
Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More