Loading video

ಮೈಸೂರಿನಲ್ಲಿ ಬೃಹತ್​ ಸೇಬಿನ​ ಹಾರ ಹಾಕಿ ವಿಜಯೇಂದ್ರಗೆ ಭರ್ಜರಿ ಸ್ವಾಗತ; ಇಲ್ಲಿದೆ ವಿಡಿಯೋ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 19, 2023 | 8:15 PM

ಮೈಸೂರು ಪ್ರವಾಸ ಕೈಗೊಂಡಿರುವ ಅವರಿಗೆ ‘ಮೈಸೂರಿ(Mysore)ನಲ್ಲಿ ಬೃಹತ್​ ಸೇಬಿನ ಹಾರ ಹಾಕಿ ಭರ್ಜರಿ ಸ್ವಾಗತ ಕೋರಿದ್ದು, ಇದೇ ವೇಳೆ ಪ್ರತಾಪ್​ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಸಾಥ್​ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ, ಪಕ್ಷವನ್ನು ಸಂಘಟನೆ ಮಾಡಲು ಈ ಪ್ರವಾಸ ಕೈಗೊಂಡಿದ್ದಾರೆ.

ಮೈಸೂರು, ನ.19: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಬಿವೈ ವಿಜಯೇಂದ್ರ(BY vijayendra) ಅವರು ರಾಜ್ಯ ಪ್ರವಾಸದಲ್ಲಿ ತೊಡಗಿದ್ದಾರೆ. ಅದರಂತೆ ಇಂದು (ನ.19) ಮೈಸೂರು ಪ್ರವಾಸ ಕೈಗೊಂಡಿರುವ ಅವರಿಗೆ ‘ಮೈಸೂರಿ(Mysore)ನಲ್ಲಿ ಬೃಹತ್​ ಸೇಬಿನ ಹಾರ ಹಾಕಿ ಭರ್ಜರಿ ಸ್ವಾಗತ ಕೋರಿದ್ದು, ಇದೇ ವೇಳೆ ಪ್ರತಾಪ್​ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಸಾಥ್​ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ, ಪಕ್ಷವನ್ನು ಸಂಘಟನೆ ಮಾಡಲು ಈ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳಿಗೆ ವಿವಿಧ ಫಲಗಳನ್ನು ಅರ್ಪಿಸಿ, ಆಶೀರ್ವಾದ ಪಡೆದರು. ಇದಾದ ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ, ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ