ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ವಿಜಯೇಂದ್ರ ಶಾಕ್

Edited By:

Updated on: May 04, 2026 | 3:12 PM

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಾಗಲಕೋಟೆ ಉಪಚುನಾವಣೆಯ ಹಿನ್ನಡೆಯನ್ನು ಒಪ್ಪಿಕೊಂಡಿದ್ದಾರೆ. ಪಕ್ಷವು ದಾವಣಗೆರೆ ದಕ್ಷಿಣದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ ಎಂದಿರುವ ಅವರು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರು 15 ದಿನಗಳ ಕಾಲ ಬೀಡುಬಿಟ್ಟಿದ್ದರೂ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಈ ಹಿನ್ನಡೆಗೆ ಕಾರಣಗಳನ್ನು ಪರಾಮರ್ಶೆ ಮಾಡಲಾಗುವುದು ಎಂದಿದ್ದಾರೆ.

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ ಬಗ್ಗೆ ಪರಾಮರ್ಶೆ ಮಾಡುತ್ತೇವೆ ಎಂದಿದ್ದಾರೆ. ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳು 15 ದಿನ ಬೀಡುಬಿಟ್ಟಿದ್ದರು. ಇಡೀ ಸಚಿವ ಸಂಪುಟವೇ ಬಾಗಲಕೋಟೆಯಲ್ಲಿ ಬೀಡು ಬಿಟ್ಟಿತ್ತು. ಉಪಚುನಾವಣೆಗಳ ಇತಿಹಾಸ ನಮ್ಮ ಕಣ್ಮುಂದೆ ಇದೆ. ಯಾವ ರೀತಿ ಸಂಘಟನೆ ಮಾಡಿ ಬಲ ತುಂಬಬೇಕು ಅಂತ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More