ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ಡಿಕೆ ಶಿವಕುಮಾರ್​ ವಿರುದ್ಧ ವಿಜಯೇಂದ್ರ ಕಿಡಿ

ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ಡಿಕೆ ಶಿವಕುಮಾರ್​ ವಿರುದ್ಧ ವಿಜಯೇಂದ್ರ ಕಿಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 20, 2024 | 9:11 PM

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಟಿ ರವಿ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ಸರ್ಕಾರದ ದಬ್ಬಾಳಿಕೆಯನ್ನು ಖಂಡಿಸಿ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜಕೀಯ ಪಿತೂರಿಯಿಂದ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. ಮುಂದಿನ ಹೋರಾಟದ ಕುರಿತು ನಾಳೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ದಾವಣಗೆರೆ, ಡಿಸೆಂಬರ್​ 20: ಸಿ.ಟಿ.ರವಿ (CT Ravi) ಮೇಲೆ ಸರ್ಕಾರ ದಬ್ಬಾಳಿಕೆ, ದೌರ್ಜನ್ಯ ಮಾಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ಗೆ ನಾವು ಹೇಳಲು ಬಯಸುತ್ತೇನೆ. ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಹೈಕೋರ್ಟ್​ ಆದೇಶವನ್ನು ನಾವು ಸ್ವಾಗತಿಸ್ತೇವೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಕಪಾಳಮೋಕ್ಷ ಮಾಡಿದೆ. ರಾಜಕೀಯ ಪಿತೂರಿ ಮಾಡಿ ದೌರ್ಜನ್ಯವನ್ನ ಎಸಗಿದ್ದಾರೆ. ಮುಂದಿನ ಹೋರಾಟದ ಕುರಿತು ನಾಳೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 20, 2024 09:08 PM