Vijayendra Oath Taking Live Streaming: ಬಿವೈ ವಿಜಯೇಂದ್ರ ಪಟ್ಟಾಭಿಷೇಕ ನೇರ ಪ್ರಸಾರ

Edited By:

Updated on: Nov 15, 2023 | 10:15 AM

Vijayendra Oath Taking Live Streaming: ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದು, ಅದರ ನೇರ ಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, (ನವೆಂಬರ್ 15): ಆರು ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿ ಕಚೇರಿಯಲ್ಲಿ ಸಂಭ್ರಮವೇ ಮಾಯವಾಗಿತ್ತು. ಈಗ ಬಿವೈ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಯಡಿಯೂರಪ್ಪ ಬಣದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಹಲವು ದಿನಗಳಿಂದ ಹೈಕಮಾಂಡ್ ಅಳೆದು ತೂಗಿ ವಿಜಯೇಂದ್ರ ಅವರಿಗೆ ಕರ್ನಾಟಕ ಬಿಜೆಪಿ ಪಟ್ಟ ಕಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಬಿಜೆಪಿಯಲ್ಲೀಗ ಯುವ ಹವಾ ಶುರುವಾಗಿದೆ. ಇನ್ನು ಬಿವೈ ವಿಜಯೇಂದ್ರ ಅವರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭದ ನೇರ ಪ್ರಸಾರ ಇಲ್ಲಿದೆ.