Karnataka Assembly Polls: ಬಿಎಸ್ ಯಡಿಯೂರಪ್ಪರನ್ನು ಕಾಣಲು ಬಂದ ಮಠಾಧೀಶರನ್ನು ಕಾರಲ್ಲಿ ಕೂರಿಸಿಕೊಂಡು ಸುತ್ತು ಹಾಕಿದ ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Mar 31, 2023 | 2:50 PM

ಇವತ್ತು ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪರನ್ನು ಕಾಣಲು ಕೆಲ ಮಠಾಧೀಶರು ನಾಯಕರ ಕಾವೇರಿ ನಿವಾಸಕ್ಕೆ ಬಂದಿದ್ದರು.

ಬೆಂಗಳೂರು: ರಾಜ್ಯದ ಮಠಾಧೀಶರು ಚುನಾವಣೆ ಸಮಯದಲ್ಲಿ ಮುನಿಸಿಕೊಳ್ಳದಂತಿರಲು ಬಿಜೆಪಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಅನಿಸುತ್ತೆ. ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕೆಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ (Jaya Mruthyunjaya Swamiji) ನೇತೃತ್ವದಲ್ಲಿ ಸಮುದಾಯದವರು ಬಹಳ ದಿನಗಳಿಂದ ಹೋರಾಟ ನಡೆಸುತ್ತಿದ್ದರು. ಚುನಾವಣೆ ತೀರ ಹತ್ತಿರಕ್ಕೆ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೀಸಲಾತಿ ಘೋಷಿಸಿಬಿಟ್ಟರು. ಇವತ್ತು ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪರನ್ನು (BS Yediyurappa) ಕಾಣಲು ಕೆಲ ಮಠಾಧೀಶರು ನಾಯಕರ ಕಾವೇರಿ ನಿವಾಸಕ್ಕೆ ಬಂದಿದ್ದರು. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರೂ ಆಗಿರುವ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಸ್ವಾಮಿಗಳನ್ನು ಕಾರಿನಲ್ಲಿ ಕೂರಿಸಿಕೊಂಡು ಸುತ್ತು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.