BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ

Edited By:

Updated on: Jun 26, 2026 | 9:12 AM

ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಜೂನ್ 26: ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿರುವ ವಿಜಯೇಂದ್ರ ಅವರಿಗೆ ಸಂಸದ ಬ್ರಿಜೇಶ್ ಚೌಟ ಸಾಥ್ ನೀಡಿದ್ದು, ಸ್ಥಳೀಯ ಶಾಸಕರಾದ ಹರೀಶ್ ಪೂಂಜಾ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹಾಗೂ ಯಶ್‌ಪಾಲ್ ಸುವರ್ಣ ಸೇರಿದಂತೆ ಹಲವು ಗಣ್ಯರು ಅವರೊಂದಿಗೆ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More