ಮುಡಾ ಹಗರಣದ ಕಡತಗಳನ್ನು ಸಚಿವ ಭೈರತಿ ಸುರೇಶ್ ಬೆಂಗಳೂರಿಗೆ ಎತ್ತಿಕೊಂಡು ಬಂದಿದ್ದಾರೆ: ಬಿವೈ ವಿಜಯೇಂದ್ರ

ಮುಡಾ ಹಗರಣದ ಕಡತಗಳನ್ನು ಸಚಿವ ಭೈರತಿ ಸುರೇಶ್ ಬೆಂಗಳೂರಿಗೆ ಎತ್ತಿಕೊಂಡು ಬಂದಿದ್ದಾರೆ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 03, 2024 | 11:42 AM

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಅವರದ್ದೇ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಆರೋಪಗಳನ್ನು ಮಾಡಿದ್ದಾರೆ ಎಂದ ವಿಜಯೇಂದ್ರ, ರಾಜ್ಯದ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿ ಹಗಲ ದರೋಡೆ ನಡೆಸಿದೆ, ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಅಧಿಕಾರ ಅದಕ್ಕಿಲ್ಲ ಎಂದರು.

ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ಮುಳುಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವನ್ನು ಇಂದು ಮಾಡಿದರು. ಈ ಸಂದರ್ಭದಲ್ಲಿ ಸಿಎಂ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮೈಸೂರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ 15 ಸೈಟುಗಳನ್ನು ಹಂಚಲಾಗಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮುಡಾ ಕಚೇರಿಗೆ ತೆರಳಿ, ತರಾತುರಿಯಲ್ಲಿ ಅಧಿಕಾರಿಗಳನ್ನು ಟ್ರಾನ್ಸ್ ಫರ್ ಮಾಡಿ ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಓಡಿಬಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಭಂಡ ಸರ್ಕಾರದ ಬಣ್ಣ ಬಯಲಾಗಿದೆ ಮತ್ತು ದಿನಕ್ಕೊಂದು ಹಗರಣ ಹೊರಬೀಳುತ್ತಿದೆ. ಹಗರಣಗಳು ಸಿಎಂ ಗಮನಕ್ಕೆ ಬಾರದೆ ನಡೆದಿರುವುದಿಲ್ಲ, ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುತ್ತ ಸಿಎಂ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರೆ ನಮ್ಮ ಹಕ್ಕನ್ನು ಹತ್ತಿಕ್ಕಲಾಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ ಕರ್ನಾಟಕ: ಬಿವೈ ವಿಜಯೇಂದ್ರ ವಾಗ್ದಾಳಿ