BZ Zameer Ahmed: ಅಲ್ಲಾಹ್ ಮತ್ತು ತಾಯಿ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬಿಜೆಡ್ ಜಮೀರ್ ಅಹ್ಮದ್

Edited By: ಅರುಣ್​ ಕುಮಾರ್​ ಬೆಳ್ಳಿ

Updated on: May 20, 2023 | 4:19 PM

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರಿಂದ ಪ್ರತಿಜ್ಞಾ ವಿಧಿ ಬೋಧನೆ ನಡೆಯಿತು.

ಬೆಂಗಳೂರು: ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ನಡೆದ ಹೊಸ ಸರ್ಕಾರದ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಚಾಮರಾಜಪೇಟೆ ಶಾಸಕ ಬಿಜೆಡ್ ಜಮೀರ್ ಅಹ್ಮದ್ (BZ Zameer Ahmed) ಅವರು ಸಂಪುಟ ದರ್ಜೆ ಸಚಿವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಜಮೀರ್ ಅವರು ಅಲ್ಲಾಹು (Allah) ಮತ್ತು ಅವರ ತಾಯಿಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರಿಂದ (Thawar Chand Gehlot) ಪ್ರತಿಜ್ಞಾ ವಿಧಿ ಬೋಧನೆ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಂದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ನಟ ಕಮಲ್ ಹಾಸನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇನ್ನೂ ಕೆಲ ನಾಯಕರು ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 20, 2023 04:19 PM
Follow Us
Web contact

TV9 Kannada

Read More