Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಎಸ್ ಟಿ ಸೋಮಶೇಖರ್ ಭುಜದಡವಿ ಆತ್ಮೀಯತೆ ಪ್ರದರ್ಶಿಸಿದ ಸಿದ್ದರಾಮಯ್ಯ

ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಎಸ್ ಟಿ ಸೋಮಶೇಖರ್ ಭುಜದಡವಿ ಆತ್ಮೀಯತೆ ಪ್ರದರ್ಶಿಸಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 24, 2024 | 1:09 PM

ಸಿಎಂ ಸಮಾವೇಶವನ್ನು ಉದ್ಘಾಟಿಸಿ ಮಾತಾಡುವ ಮೊದಲು ವೇದಿಕೆಯ ಮೇಲಿದ್ದ ಗಣ್ಯರು ಸಸಿಯೊಂದಕ್ಕೆ ನೀರೆರೆದರು. ಆಗಲೇ ಮುಖ್ಯಮಂತ್ರಿಯವರು ತಮ್ಮ ಎಡಭಾಗದಲ್ಲಿದ್ದ ಸೋಮಶೇಖರ್ ಅವರನ್ನು ಹತ್ತಿರ ಕರೆದು ನೀರೆರೆಯುವಂತೆ ಹೇಳಿ ಅವರ ಭುಜವನ್ನು ಆತ್ಮೀಯವಾಗಿ ತಡವಿದರು.

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಯೋಜಿಸಲಾಗಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ (The Constitution and National Integration Convention) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಿಂದೆ ತಮ್ಮ ಅಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ಶಾಸಕ ಎಸ್ ಟಿ ಸೋಮಸೇಖರ್ (ST Somashekhar) ಅವರ ಹೆಗಲ ಮೇಲೆ ಆತ್ಮೀಯವಾಗಿ ಕೈಹಾಕಿ ತಮ್ಮ ನಡುವಿನ ಬಾಂಧವ್ಯಕ್ಕೆ ಧಕ್ಕೆಯಾಗಿಲ್ಲ ಎಂಬ ಅಂಶವನ್ನು ಮತ್ತೊಮ್ಮೆ ಸಾಬೀತು ಮಾಡಿದರು. ಸಿಎಂ ಸಮಾವೇಶವನ್ನು ಉದ್ಘಾಟಿಸಿ ಮಾತಾಡುವ ಮೊದಲು ವೇದಿಕೆಯ ಮೇಲಿದ್ದ ಗಣ್ಯರು ಸಸಿಯೊಂದಕ್ಕೆ ನೀರೆರೆದರು. ಆಗಲೇ ಮುಖ್ಯಮಂತ್ರಿಯವರು ತಮ್ಮ ಎಡಭಾಗದಲ್ಲಿದ್ದ ಸೋಮಶೇಖರ್ ಅವರನ್ನು ಹತ್ತಿರ ಕರೆದು ನೀರೆರೆಯುವಂತೆ ಹೇಳಿ ಅವರ ಭುಜವನ್ನು ಆತ್ಮೀಯವಾಗಿ ತಡವಿದರು. ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಸಮಾಜ ಕಲ್ಯಾಣ ಸಚಿವ ಡಾ ಹೆಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಪ್ರಿಯಾಂಕ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಮೊದಲಾದವರು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ