AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅತಿಯಾದ ಭಾರ ತಾಳಲಾರದೆ ಮೇಲಕ್ಕೆದ್ದ ಲಾರಿಯ ಕ್ಯಾಬಿನ್​ ಭಾಗ

ಅತಿಯಾದ ಭಾರ ತಾಳಲಾರದೆ ಲಾರಿಯ ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ.

Follow us
TV9 Web
| Updated By: ವಿವೇಕ ಬಿರಾದಾರ

Updated on:Jul 29, 2023 | 10:50 AM

ತುಮಕೂರು: ಸಾಮಾನ್ಯವಾಗಿ ಭಾರ ತಾಳಲಾರದೆ ಟ್ಯಾಕ್ಟರ್​ಗಳ ಕ್ಯಾಬಿನ್​ ಭಾಗ ಮೇಲೆ ಎದ್ದಿರುವುದನ್ನು ನೋಡಿದ್ದೇವೆ. ಅದೇರೀತಿ ಇಲ್ಲಿ ಅತಿಯಾದ ಭಾರ ತಾಳಲಾರದೆ ಲಾರಿಯ (Lorry) ಕ್ಯಾಬಿನ್​ ಭಾಗ ಮೇಲೆ ಎದ್ದಿರುವ ಘಟನೆ ತುಮಕೂರಿನ (Tumakuru) ಟೌನ್ ಹಾಲ್ ವೃತ್ತದಲ್ಲಿ ನಡೆದಿದೆ. ಲಾರಿ ಅತಿ ಭಾರದ ಮರದ ದಿಮ್ಮಿಗಳನ್ನು ಸಾಗಿಸುತ್ತಿತ್ತು. ನಗರದ ಟೌನ್ ಹಾಲ್ ವೃತ್ತದ ಸಿಗ್ನಲ್ ಬಳಿ ಬರುತ್ತಿದ್ದಂತೆ ಅಪ್ ಹತ್ತಲು ಸಾಧ್ಯವಾಗಲಿಲ್ಲ. ಈ ವೇಳೆ ಮುಂದೆ ಹೋಗಲು ಲಾರಿ ಜರ್ಕ್ ಹೊಡೆದ ಸಂದರ್ಭದಲ್ಲಿ ಮರದ ದಿಮ್ಮಿಗಳು ಹಿಂದಕ್ಕೆ ಜಾರಿವೆ. ಇದರಿಂದ ಲಾರಿಯ ಕ್ಯಾಬಿನ್​ ಭಾಗ ಮೇಲೆಕ್ಕೆ ಎದ್ದಿದೆ. ಇದರಿಂದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೋಲಿಸರು (Police) ಕ್ರೈನ್ ಮೂಲಕ ಲಾರಿ ಸಾಗಿಸಲು ನೆರವಾಗಿದ್ದಾರೆ.

Published On - 10:44 am, Sat, 29 July 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ