ಎಸ್ ಟಿ ಮೀಸಲಾತಿಯನ್ನು ಶೇಕಡ 3 ರಿಂದ ಶೇಕಡ 7 ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 08, 2022 | 3:02 PM

ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ಮಾಡಿರುವ ಶಿಫಾರಸ್ಸಿನ ಮೇರೆಗೆ ಎಸ್ ಟಿ ಸಮುದಾಯಕ್ಕೆ ಮೀಸಲಾತಿಯನ್ನು ಶೇಕಡ 3 ರಿಂದ ಶೇಕಡ 7ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಸಿಎಮ್ ಹೇಳಿದರು.

ಬೆಂಗಳೂರು:  ರಾಜ್ಯ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡರು. ಶುಕ್ರವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ನಿರ್ಣಯಿಸಿದ ಹಾಗೆ ಮತ್ತು ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ಮಾಡಿರುವ ಶಿಫಾರಸ್ಸಿನ ಮೇರೆಗೆ ಎಸ್ ಸಿ ಮೀಸಲಾತಿಯನ್ನು ಶೇಕಡಾ 15 ರಿಂದ 17 ಮತ್ತು ಎಸ್ ಟಿ ಸಮುದಾಯಕ್ಕೆ ಶೇಕಡ 3 ರಿಂದ ಶೇಕಡ 7ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಮತ್ತು ಆದಷ್ಟು ಬೇಗ ಇದನ್ನು ಗೆಜೆಟ್ ನಲ್ಲಿ ನೋಟಿಫೈ ಮಾಡಲಾಗುವುದು ಎಂದು ಹೇಳಿದರು.