ತಮ್ಮ ಸಮಕ್ಷಮದಲ್ಲಿರುವ ಅರ್ಜಿಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ನಿರ್ಧಾರ

ನಿನ್ನೆ ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ್ದ ಕುಮಾರಸ್ವಾಮಿಯವರು, ತಮ್ಮ ವಿರುದ್ಧ ಲೋಕಾಯುಕ್ತ ಎಸ್​ಐಟಿ ಸಲ್ಲಿಸಿದ ವರದಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಉಲ್ಲೇಖವಾಗಿರುವುದನ್ನು ಅಂಗೀಕರಿಸಿದ್ದರು. ಈಗ ಉದ್ಭವಿಸುವ ಪ್ರಶ್ನೆಯೇನೆಂದರೆ ರಾಜ್ಯಪಾಲರು ಕುಮಾರಸ್ವಾಮಿ ಮತ್ತು ಉಳಿದ ಮೂವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರೆಯೇ ಅನ್ನೋದು.

ತಮ್ಮ ಸಮಕ್ಷಮದಲ್ಲಿರುವ ಅರ್ಜಿಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಚಿವ ಸಂಪುಟ ನಿರ್ಧಾರ
|

Updated on: Aug 22, 2024 | 6:20 PM

ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಪತ್ರಿಕಾ ಗೋಷ್ಠಿಯಲ್ಲಿ ವಿವರಸಿದರು. ಪ್ರಾಸಿಕ್ಯೂಷನ್ ಅನುಮೋದನೆ ಕೋರಿ ರಾಜ್ಯಪಾಲರ ಸಮಕ್ಷಮದಲ್ಲಿರುವ 4 ಮನವಿಗಳ ಬಗ್ಗೆ ಶೀಘ್ರವಾಗಿ ತೀರ್ಮಾನ ತೆಗೆದುಕೊಂಡು ನ್ಯಾಯಾಂಗ ಪ್ರಕ್ರಿಯೆ ಸುಗಮಗೊಳಿಸಲು ಸಂಪುಟವು ರಾಜ್ಯಪಾಲರ ನೆರವು ಕೋರುತ್ತ ಸಲಹೆ ನೀಡಿಲು ಸಂಪುಟ ತೀರ್ಮಾನಿಸಿದೆ ಎಂದು ಪಾಟೀಲ್ ಹೇಳಿದರು. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ಪೂರ್ವಾನುಮತಿ ಕೋರಿ ದಿನಾಂಕ 09-10-2021 ರಂದು ಅರ್ಜಿ ಸಲ್ಲಿಸಲಾಗಿದೆ. ಮತ್ತೊಬ್ಬ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ದಿನಾಂಕ 26-02-2024 ರಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಪಾಟೀಲ್ ಹೇಳಿದರು, ಹಾಗೆಯೇ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ದೋಷಾರೋಪಣೆ ಪಟ್ಟಿಯನ್ನು ದಿನಾಂಕ 21-11-2023 ರಂದು ಸಲ್ಲಿಸಲಾಗಿದೆ.

ಇದಕ್ಕೆ ಪ್ರತಿಯಾಗಿ ಮಾನ್ಯ ರಾಜ್ಯಪಾಲರು 29-07-2024 ರಂದು ಸ್ಪಷ್ಟೀಕರಣ ಕೇಳಿರುತ್ತಾರೆ. ನಂತರ ದಿನಾಂಕ 16-08-2024 ರಂದು ಲೋಕಾಯುಕ್ತ ಎಸ್ಐಟಿ ಅಗತ್ಯವಿರುವ ಸ್ಪಷ್ಟೀಕರಣವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ಹಾಗೆಯೇ ಮಾಜಿ ಸಚಿವ ಮತ್ತು ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಪ್ರಕರಣದಲ್ಲಿ 13-05-2024 ರಂದು ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗಣಿಗಾರಿಕೆ ಪ್ರಕರಣ: ಸಹಿ ಫೋರ್ಜರಿ ಮಾಡಲಾಗಿತ್ತೆಂದ ಹೆಚ್​ಡಿ ಕುಮಾರಸ್ವಾಮಿ

Follow us
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ